ಶಿವಮೊಗ್ಗ: ಕೋವಿಡ್ ದಿಂದ ಇಡೀಜಗತ್ತು ತಲ್ಲಣಗೊಂಡಿರುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಶೈಕ್ಷಣಿಕ ಚಟುವಟಿಕೆಗಳನ್ನು ಮುಂದುವರೆಸುವ ಗುರುತರ ಜವಾಬ್ದಾರಿಯನ್ನು ನಿಭಾಯಿ ಸುವ ನಿಟ್ಟಿನಲ್ಲಿ ಈ ಶೈಕ್ಷಣಿಕ ವರ್ಷದ ಸ್ನಾತಕೋತ್ತರ ಕೋರ್ಸ್ ಗಳಿಗೆ ಆನ್‌ಲೈನ್ ಮೂಲಕ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಹೇಳಿದರು.
ವಿವಿಯ ಹೊಸ ಸಿಂಡಿಕೇಟ್ ಸಭಾಂಗಣದಲ್ಲಿ ಗುರುವಾರ ನಡೆದ 2020-21ರ ಆನ್‌ಲೈನ್ ಪ್ರವೇಶಾತಿವೆಬ್‌ಸೈಟ್ ಲೋಕಾರ್ಪಣೆಗೊಳಿಸಿಅವರು ಮಾತನಾಡಿದರು. ರಾಜ್ಯದಲ್ಲಪ್ರಪ್ರಥಮವಾಗಿ ಸಂಪೂರ್ಣ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್‌ಲೈನ್‌ನಲ್ಲಿ ಪರಿಚಯಿಸುತ್ತಿರುವ ಹೆಗ್ಗಳಿಕೆ ಕುವೆಂಪು ವಿವಿಗೆ ಸಲ್ಲುತ್ತದೆ. ಕೋವಿಡ್-19 ಮಾರ್ಗಸೂಚಿ ಈಗಲೂ ಅಸ್ತಿತ್ವದಲ್ಲಿರುವ ಕಾರಣ ವಿದ್ಯಾರ್ಥಿಗಳು ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಭೌತಿಕವಾಗಿ ಕ್ಯಾಂಪಸ್ ಗೆ ಬರುವ ಬದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಅಂತಿಮ ವರ್ಷದ ವಿದ್ಯಾರ್ಥಿಗಳಿಗೆಈಗಾಗಲೇ ನವೆಂಬರ್ 17ರಿಂದ ತರಗತಿಗಳನ್ನು ಪ್ರಾರಂಭಿಸಲು ಯುಜಿಸಿ ನಿರ್ದೇಶನ ನೀಡಿದ್ದು, ಇದರ ಜೊತೆಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಪ್ರವೇಶ ಪಡೆಯಲು ಅವಕಾಶ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಕುಲಸಚಿವ ಪ್ರೊ. ಎಸ್. ಎಸ್. ಪಾಟೀಲ್ ಮಾತನಾಡಿ, ಆನ್‌ಲೈನ್ ಪ್ರವೇಶಾತಿ ಪ್ರಕ್ರಿಯೆ ಒಂದು ವಿನೂತನ ಆಲೋಚನೆಯಾಗಿದ್ದು, ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಏನಾದರೂ ಸಮಸ್ಯೆಯಾದಲ್ಲಿ ಹೆಲ್ಪ್ಲೈನ್ ಸೌಲಭ್ಯವಿರುತ್ತದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಒಳಗೊಂಡ ಈ-ಕೈಪಿಡಿ ಮತ್ತು ವೀಡಿಯೋ ಕೂಡ ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತದೆ.
ವಿದ್ಯಾರ್ಥಿಗಳು ತಮ್ಮ ಇಚ್ಛೆಯ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಈ ವೀಡಿಯೋ ಮತ್ತು ಕೈಪಿಡಿಯನ್ನು ನೋಡಿ ಮಾಹಿತಿ ಪಡೆಯಬಹುದು. ನಂತರವೂ ಸಮಸ್ಯೆ ಉಂಟಾದಲ್ಲಿ ಹೆಲ್ಪ್ಲೈನ್‌ಗೆ ಕರೆ ಮಾಡಬಹುದು ಎಂದು ಹೇಳಿದರು. ಪರೀಕ್ಷಾಂಗ ಕುಲಸಚಿವ ಪ್ರೊ. ಪಿ. ಕಣ್ಣನ್, ಶೈಕ್ಷಣಿಕ ವಿಭಾಗದ ಉಪಕುಲಸಚಿವ ಡಾ| ಗೋವಿಂದರಾಜು, ಡಾ| ಧರಣಿಕುಮಾರ್, ವಿವಿಧ ವಿಭಾಗಗಳ ಡೀನ್‌ಗಳು, ಪ್ರವೇಶಾತಿ ಸಮಿತಿ ಸದ್ಯಸ್ಯರು ಮತ್ತಿತರರು ಇದ್ದರು.
ಪ್ರವೇಶಾತಿ ಮೂರು ಸುತ್ತುಗಳಲ್ಲಿ ನಡೆಯಲಿದ್ದು ಪ್ರತಿ ಸುತ್ತಿಗೂ ಎರಡುದಿನಗಳ ಕಾಲಾವಕಾಶ ಇರಲಿದೆ. ವಿದ್ಯಾರ್ಥಿಗಳು ಮೂರು ವಿಭಾಗಗಳಿಗೆ ಅರ್ಜಿ ಸಲ್ಲಿಸಬಹುದು. ಒಂದು ವಿಭಾಗಕ್ಕೆಪ್ರವೇಶಾತಿ ಪಡೆದ ನಂತರ ಉಳಿದ ಎರಡು ವಿಭಾಗಗಳ ಆಯ್ಕೆ ತಾನಾಗಿಯೇನಿಷ್ಕ್ರಿಯಗೊಳ್ಳುತ್ತದೆ. ಒಂದು ವೇಳೆವಿದ್ಯಾರ್ಥಿ ವರ್ಗಾವಣೆ ಬಯಸಿದ್ದಲ್ಲಿ ಆನ್‌ಲೈನ್‌ನಲ್ಲಿಯೇ ಅದಕ್ಕೂಅವಕಾಶವಿರುತ್ತದೆ ಹೆಚ್ಚಿನ ಮಾಹಿತಿಗಾಗಿ08282-256301ನಿಂದ 256306 ನಂಬರ್‌ಗಳಿಗೆ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಕರೆ ಮಾಡಬಹುದು.