ಶಿವಮೊಗ್ಗ: ಕೋವಿಡ್ -19 ಸೋಂಕು ಭೀkyasanur forest diseaseತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆ ಜಿಲ್ಲೆಯಲ್ಲಿ ಮಂಗನ ಖಾಯಿಲೆಗೆ ಮತ್ತೊಂದು ಬಲಿಯಾಗಿದೆ.
ತೀರ್ಥಹಳ್ಳಿ ತಾಲೂಕಿನ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ (52) ಮಂಗನ ಖಾಯಿಲೆಗೆ ಬಲಿಯಾದ ವ್ಯಕ್ತಿ.
ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಪ್ರಾಥಮಿಕ ಕೇಂದ್ರ ವ್ಯಾಪ್ತಿಯ ಉಡುಕೆರೆ ಗ್ರಾಮದ ಸುಬ್ರಹ್ಮಣ್ಯ ಅವರಿಗೆ ಕಳೆದ ಮಾರ್ಚ್ 30 ರಂದು ಮಂಗನ ಖಾಯಿಲೆ ( ಕ್ಯಾಸನೂರು ಫಾರೆಸ್ಟ್ ಡಿಸೀಸ್) ಇರುವುದು ಪತ್ತೆಯಾಗಿತ್ತು. ಅಂದಿನಿಂದಲೂ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಣಿಪಾಲ್ ಆಸ್ಪತ್ರೆಯಲ್ಲಿ ಸುಬ್ರಹ್ಮಣ್ಯ ಇಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ 132 ಜನರಲ್ಲಿ ಈ ಖಾಯಿಲೆ ಕಾಣಿಸಿಕೊಂಡಿದ್ದು, ಇದುವರೆಗೆ ಜಿಲ್ಲೆಯಲ್ಲಿ 5 ಜನರನ್ನು ಬಲಿ ಪಡೆದಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿಯೇ 105 ಜನರಲ್ಲಿ ಈ ಖಾಯಿಲೆಯ ಪಾಸಿಟಿವ್ ಕಂಡುಬಂದಿದೆ. ಹೊಸನಗರದಲ್ಲಿ 1 ಹಾಗೂ ಸಾಗರ ತಾಲೂಕಿನ 26 ಜನರಲ್ಲಿ ಕ್ಯಾಸನೂರು ಫಾರೆಸ್ಟ್ ಡಿಸೀಸ್ ಪಾಸಿಟಿವ್ ಕಂಡುಬಂದಿದೆ.