Advertisement

Kyathasandra; ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಡಿಕ್ಕಿ ಹೊಡೆದ ಲಾರಿ

11:06 AM Dec 28, 2023 | Team Udayavani |

ತುಮಕೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದ ಘಟನೆ ತುಮಕೂರು ಬಳಿ ನಡೆದಿದೆ. ಸ್ವಲ್ಪದರಲ್ಲಿ ಹೆಚ್ಚಿನ ಅನಾಹುತವೊಂದು ತಪ್ಪಿದೆ.

Advertisement

ಕಳೆದ ತಡರಾತ್ರಿ ಈ ಅಪಘಾತ ನಡೆದಿದೆ. ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬೆಂಗಳೂರು ಕಡೆಗೆ ಹೋಗುತ್ತಿದ್ದ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರನ್ನು ಲಾರಿಯು ಉಜ್ಜಿಕೊಂಡು ಹೋಗಿದೆ.

ಇದನ್ನೂ ಓದಿ:INDvsSA; ಇದು ಟಾಪ್ 10 ಶತಕಗಳಲ್ಲಿ ಒಂದು…: ರಾಹುಲ್ ಆಟವನ್ನು ಕೊಂಡಾಡಿದ ಗಾವಸ್ಕರ್

ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ.

ಅಪಘಾತದ ಬಳಿಕ ಬೇರೆ ಕಾರಿನಲ್ಲಿ ಬೆಂಗಳೂರಿಗೆ ಸಚಿವರು ತೆರಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next