ಹೊಸದಿಲ್ಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮಿಳುನಾಡಿನ ಹಿರಿಯ ಬಿಜೆಪಿ ನಾಯಕ ಎಲ್.ಗಣೇಶನ್ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ ಈ ಹಿಂದಿನ ರಾಜ್ಯಪಾಲರಾಗಿದ್ದ ನಜ್ಮಾ ಹೆಪ್ತುಲ್ಲಾ ಅವರು ನಿವೃತ್ತಿಯಾಗಿದ್ದು, ಅವರ ಬಳಿಕ ನಂತರ ರಾಜ್ಯಪಾಲರ ಹುದ್ದೆಯು ಖಾಲಿಯಾಗಿತ್ತು. ಸಿಕ್ಕಿಂ ಗವರ್ನರ್ ಗಂಗಾ ಪ್ರಸಾದ್ ಚೌರಾಸಿಯಾ ಅವರು ಮಣಿಪುರದ ರಾಜ್ಯಪಾಲರಾಗಿ ಹೆಚ್ಚುವರಿ ಅಧಿಕಾರ ವಹಿಸಿಕೊಂಡಿದ್ದರು.
ಇದನ್ನೂ ಓದಿ:ಕಾಬೂಲ್ ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು: ಕಾಲ್ತುಳಿತಕ್ಕೆ ಏಳು ಮಂದಿ ಸಾವು!
ವಿಶೇಷವೆಂಬಂತೆ, ಗಣೇಶನ್ ಅವರು ನಜ್ಮಾ ಹೆಪ್ತುಲ್ಲಾ ಅವರ ಸ್ಥಾನದಲ್ಲಿ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು. ತಮಿಳುನಾಡು ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೊದಲು, ಅವರು ಆರ್‌ಎಸ್‌ಎಸ್‌ನಲ್ಲಿ ಪ್ರಚಾರಕರಾಗಿದ್ದರು.
ಡಾ. ನಜ್ಮಾ ಎ ಹೆಪ್ತುಲ್ಲಾ ಆಗಸ್ಟ್ 2016 ರಲ್ಲಿ ಮಣಿಪುರದ ರಾಜ್ಯಪಾಲರಾಗಿ ಪ್ರಮಾಣವಚನ ಸ್ವೀಕರಿಸಿದರು