ಹಾಸನ: ಪೌರಕಾರ್ಮಿಕರು ದುಶ್ಚಟಗಳಿಂದ ದೂರವಿದ್ದು,ಕುಟುಂಬದ ಪೋಷಣೆ ಹಾಗೂ ತಮ್ಮ ಆರೋಗ್ಯದ ಕಡೆ ಕಾಳಜಿವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸಲಹೆ ನೀಡಿದರು.
ಹಾಸನ ನಗರಸಭೆ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರುತಮ್ಮಆರೋಗ್ಯಕಾಪಾಡಿಕೊಳ್ಳುವುದರ ಜೊತೆಗೆ ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮಿಸಬೇಕು ಎಂದು ಹೇಳಿದರು.
ಜನರಲ್ಲಿ ಅರಿವು ಮೂಡಿಸಿ: ನಾವು ವೈಯಕ್ತಿಕ ಸ್ವಚ್ಛತೆ ಜೊತೆಗೆ ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿಟ್ಟರೆ ದೇವರಿಗೆ ಹತ್ತಿರವಾಗುತ್ತೇವೆ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಅವರ ಮಾರ್ಗದರ್ಶನದಂತೆ ಎಲ್ಲರೂ ನಡೆಯಬೇಕು, ಪೌರ ಕಾರ್ಮಿಕರು ನಗರ ಶುಚಿ ಮಾಡುವುದರ ಜೊತೆಗೆ ಸಾರ್ವಜನಿಕರಿಗೆ ಸ್ವತ್ಛತೆ ಕುರಿತು ಅರಿವು ಮೂಡಿಸಿದರೆ ಉತ್ತಮ ಪರಿಸರ ನಿರ್ಮಾಣವಾಗುತ್ತದೆ ಎಂದುಕಿವಿಮಾತು ಹೇಳಿದರು.
ಪೌರ ಕಾರ್ಮಿಕರು ತಮ್ಮ ಜವಾಬ್ದಾರಿ ಅರಿತುಕೊಂಡು ನಗರ ಸ್ವತ್ಛತೆಯಲ್ಲಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ. ಮನೆಯ ಹಂತದಲ್ಲಿಯೇ ಜೈವಿಕವಾಗಿ ಕೊಳೆಯುವ, ಕೊಳೆಯದಂತಹ ಪ್ಲಾಸ್ಟಿಕ್, ಗ್ಲಾಸ್ ಮುಂತಾದ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು. ಪೌರ ಕಾರ್ಮಿಕ ಸಂಘದ ಗೌರವಾಧ್ಯಕ್ಷ ನಾಗರಾಜ್ ಹೆತ್ತೂರು ಮಾತನಾಡಿ, ಕಾಯಂ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 38 ಮನೆ ನಿರ್ಮಾಣವಾಗುತ್ತಿದ್ದು, ಇನ್ನುಳಿದವರಿಗೂ ನಿವೇಶನ ಖರೀದಿಸಿ, ಗೃಹ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಡೀಸಿಗೆ ಮನವಿ ಮಾಡಿದರು.
ಕಾಯಂ ಪೌರ ಕಾರ್ಮಿಕರು ವಿವಿಧ ಕಾರಣಗಳಿಂದ ನಿಧನ ಹೊಂದಿದ್ದಾರೆ. ಅವರ ಜಾಗಕ್ಕೆ ಮತ್ತಷ್ಟು ಮಂದಿ ನೇಮಕ ಮಾಡಿಕೊಳ್ಳಬೇಕು ಹಾಗೂ ಕೊರೊ ನಾಸಂದರ್ಭದಲ್ಲಿನಿಷ್ಠೆಯಿಂದಕಾರ್ಯನಿರ್ವಹಿಸಿದ ಪೌರಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ನೀಡಬೇಕು. ಗುತ್ತಿಗೆ ಕಾರ್ಮಿಕರಿಗೂ ಮೂಲ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಜಗದೀಶ್, ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ರಂಗಸ್ವಾಮಿ,ಕಿರಿಯಎಂಜಿನಿಯರ್‌ಗಳಾದ ಪ್ರವೀಣ್ ಕುಮಾರ್, ಕವಿತಾ, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್.ಶಂಕರ್, ಸದಸ್ಯರು, ಪೌರಕಾರ್ಮಿಕರು ಉಪಸ್ಥಿತರಿದ್ದರು.
ಪೌರಕಾರ್ಮಿಕರ ಅಭಿವೃದ್ಧಿಗಾಗಿ ಹಾಗೂ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಡಳಿತ ಸಿದ್ಧವಿದೆ. ಇನ್ನು ಮುಂದೆಕಾನೂನಿನ ಚೌಕಟ್ಟಿನಲ್ಲಿ ನೀಡ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪೌರಕಾರ್ಮಿಕರು ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿರುವುದು ಶ್ಲಾಘನಾರ್ಹ.
–ಆರ್.ಗಿರೀಶ್, ಜಿಲ್ಲಾಧಿಕಾರಿ