ಮಂಗಳೂರು/ಉಡುಪಿ: ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಫಲಾನು ಭವಿಗಳೆಂದು ನೋಂದಾಯಿತರಾಗಿ ವಿವಿಧ ಧನ ಸಹಾಯ ಪಡೆಯುತ್ತಿರುವ ಅನರ್ಹ ಕಾರ್ಮಿಕರು ಮತ್ತು ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸ ನಿರ್ವಹಿಸದೇ ಇರುವ ಕಾರ್ಮಿಕರ ನೋಂದಣಿಯನ್ನು ರದ್ದುಪಡಿಸಲು ಫೆ. 25ರ ವರೆಗೆ ಬೋಗಸ್ ಕಾರ್ಡು ರದ್ದತಿ ಅಭಿಯಾನ ಕೈಗೊಳ್ಳಲಾಗಿದೆ.
ಅಭಿಯಾನದಲ್ಲಿ ಅನರ್ಹ ಕಾರ್ಮಿಕರ ನೋಂದಣಿ ರದ್ದು ಪಡಿಸಿ, ಮಂಡಳಿಯ ಯಾವುದೇ ಸೌಲಭ್ಯ ಪಡೆಯದಂತೆ ತಡೆಹಿಡಿಯಲು ಕ್ರಮ ಕೈಗೊಳ್ಳಲಾಗುವುದು. ಅನರ್ಹರು ನೋಂದಾಯಿಸಿದ್ದಲ್ಲಿ ಅಥವಾ ಕಟ್ಟಡ ಮತ್ತು ಇತರ ನಿರ್ಮಾಣ ಕೆಲಸ ಹೊರತುಪಡಿಸಿ ಅನ್ಯ ವೃತ್ತಿಯವರು ಕೂಡಲೇ ಕಟ್ಟಡ ಕಾರ್ಮಿಕರ ಗುರುತಿನ ಚೀಟಿಯನ್ನು ಸ್ವಯಂ ಇಚ್ಛೆಯಿಂದ ಫೆ. 25 ರೊಳಗೆ ಸಂಬಂಧಪಟ್ಟ ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರ ಕಚೇರಿಗೆ ಮರಳಿಸಿ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅನರ್ಹ ಕಾರ್ಮಿಕರಿಗೆ ಉದ್ಯೋಗ ಪ್ರಮಾಣಪತ್ರ ನೀಡುವ ವ್ಯಕ್ತಿ, ಸಂಸ್ಥೆ, ಪ್ರಾಧಿಕಾರ, ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.