ಮಂಗಳೂರು/ಉಡುಪಿ: ನಗರದ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿಗೊಳಪಡಿಸಿ ಹಂತ ಹಂತವಾಗಿ ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಸ ಸಾಗಿಸುವ ವಾಹನಗಳ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್, ಒಳಚರಂಡಿ ಕಾರ್ಮಿಕರ ಅನಿರ್ದಿ ಷ್ಟಾವಧಿ ಮುಷ್ಕರ ಬುಧವಾರ ನಡೆದಿದೆ.
ಮಂಗಳೂರಿನಲ್ಲಿ ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ ಹಾಗೂ ಮಂಗಳೂರು ಸಫಾಯಿ ಕರ್ಮಚಾರಿಗಳ ಸಂಘದ ಆಶ್ರಯದಲ್ಲಿ ಮಂಗಳೂರಿನ ತಾಲೂಕು ಆಡಳಿತ ಸೌಧದ ಮುಂದೆ ಕೈಗೊಂಡಿರುವ ಮುಷ್ಕರಕ್ಕೆ ಬುಧವಾರ ಬೆಳಗ್ಗೆ ಹೊರಗುತ್ತಿಗೆ ನೌಕರರ ಸಂಘದ ಸಂಚಾಲಕ ಅಣ್ಣಪ್ಪ ಕಾರೆಕ್ಕಾಡು ಚಾಲನೆ ನೀಡಿದರು. ಮಂಗಳೂರು ನಗರದಲ್ಲಿ ಕಸ ಸಂಗ್ರಹ ಸೇರಿದಂತೆ ವಿವಿಧ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿತ್ತು. ಗುರುವಾರವೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆ ಇದೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರ ನಡೆಸಿಯಿತು.