ದೇವನಹಳ್ಳಿ: ಕೆಂದ್ರ ಮತ್ತು ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದೆ ಎಂದು ಶಾಸಕ ಕೃಷ್ಣ ಬೈರೇಗೌಡ ತಿಳಿಸಿದರು.
ತಾಲೂಕಿನ ದ್ಯಾವರಹಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೋಟಿ ಲೆಕ್ಕದಲ್ಲಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿಅಧಿಕಾರಕ್ಕೆ ಬಂದ ಕೇಂದ್ರದಿಂದ ಇನ್ನು ಉದ್ಯೋಗ ಸೃಷ್ಟಿಸಲು ಸಾಧ್ಯವಾಗಿಲ್ಲ.ಇಂದು ಕೋಟ್ಯಂತರ ಉದ್ಯೋಗಿಗಳುಕೆಲಸ ಕಳೆದುಕೊಂಡು ಮನೆಯಲ್ಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇಶದ ಗಡಿಯನ್ನು ಅತಿಕ್ರಮಣ ಮಾಡಿ ಸೇನಾ ನೆಲೆ ಸ್ಥಾಪಿಸಿರುವ ಚೀನಾದ ಸೈನಿಕರನ್ನು ಹಿಮ್ಮೆಟ್ಟಿಸುವ ಧೈರ್ಯವನ್ನು ಪ್ರಧಾನಿ ಮೋದಿ ಮಾಡುತ್ತಿಲ್ಲ ಎಂದು ಕಿಡಿಕಾರಿದರು. ಸಿದ್ದರಾಮಯ್ಯಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ವಸತಿ ಯೋಜನೆಯಡಿನೀಡಿದ ಫಲಾನುಭವಿಗಳಿಗೆ 2 ವರ್ಷ ಕಳೆದರೂ ಅನುದಾನ ಬಿಡುಗಡೆಯಾಗಿಲ್ಲ. ಸರ್ಕಾರ ಕೊರೊನಾ ಹೆಸರಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಆರೋಪಿಸಿದರು.
ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಆಡಳಿತ ಇದ್ದಾಗ ಕೆರೆಗಳಿಗೆ ನೀರು ತುಂಬಿಸುವಕೆಲಸವಾಗಿದ್ದು, ತ್ಯಾಜ್ಯ ಸಂಸ್ಕರಿಸಿದ ನೀರು ಕೆರೆಗೆ ಹರಿಸಲು 883 ಕೋಟಿ ವೆಚ್ಚ ಮಾಡಿದ್ದು ಸಾರ್ಥಕವಾಗಿದೆ. ಬಿಜೆಪಿಗೆ ಶಾಶ್ವತ ಯೋಜನೆಗಳ ಬಗ್ಗೆ ಬದ್ಧತೆ ಇಲ್ಲ ಎಂದು ಹೇಳಿದರು.
ಮಾಜಿ ಶಾಸಕ ಮುನಿನರಸಿಂಹಯ್ಯ, ಜಿಪಂ ಸದಸ್ಯರಾದ ಕೆ.ಸಿ.ಮಂಜುನಾಥ್, ಅನಂತಕುಮಾರಿಚಿನ್ನಪ್ಪ, ತಾಲೂಕುಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಉಪಾಧ್ಯಕ್ಷ ದ್ಯಾವರಹಳ್ಳಿ ವಿ.ಶಾಂತ ಕುಮಾರ್, ಕಾಂಗ್ರೆಸ್‌ಹಿಂದುಳಿದವರ್ಗಗಳ ಘಟಕ ಅಧ್ಯಕ್ಷ ಕೋದಂಡರಾಮಯ್ಯ, ಕೆಪಿಸಿಸಿ ಹಿಂದುಳಿದ ವರ್ಗ ರಾಜ್ಯ ಘಟಕ ಕಾರ್ಯದರ್ಶಿ ಎಸ್.ಆರ್.ರವಿಕುಮಾರ್, ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಇದ್ದರು.