Advertisement
ಪಟ್ಟಣದ 11ನೇ ವಾರ್ಡ್ ಕೋಲಭಾವಿ ಬಡವಣೆ ಮುಖ್ಯರಸ್ತೆ ಪಕ್ಕದಲ್ಲಿರುವ ಚರಂಡಿಗಳೆಲ್ಲ ಹೂಳು ತುಂಬಿ ತ್ಯಾಜ್ಯ ನೀರು ಮುಂದೆ ಸಾಗದಷ್ಟು ಕೆಟ್ಟ ಪರಿಸ್ಥಿತಿಗೆ ತಲುಪಿದೆ. ವಿವಿಧ ಮಳಿಗೆಗಳವರು ನಿತ್ಯ ಸುರಿಯುವ ತ್ಯಾಜ್ಯ ರಾಶಿ, ರಾಶಿಯಾಗಿ ಸಂಗ್ರಹವಾಗುತ್ತಿದೆ. ಅದನ್ನು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇಲ್ಲಿನ ಅವ್ಯವಸ್ಥೆ ಕಂಡು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಬೀದಿನಾಯಿಗಳು, ಹಂದಿಗಳು ಆಹಾರದ ಆಸೆಗೆ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿವೆ. ಇದರಿಂದಾಗಿ ಪಟ್ಟಣದಲ್ಲಿ ಮತ್ತಷ್ಟು ಗಲೀಜು ನಿರ್ಮಾಣವಾಗುತ್ತಿದೆ. ಇದೆಲ್ಲದರ ಪರಿಣಾಮ ಪಟ್ಟಣದ ಸೌಂದರ್ಯಕ್ಕೆ ಕುಂದುಂಟಾಗುತ್ತಿದೆ. ಆದರೆ ಮೊದಲಿನಿಂದಲೂ ಸ್ವತ್ಛತೆ ಕಾಣದೆ ಎಲ್ಲೆಂದರಲ್ಲಿ ಗಲೀಜು ತುಂಬಿಕೊಂಡಿರುವ ವಾರ್ಡ್‌ಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಸಂಬಂಧಿಸಿವರು ಮುಂದಾಗಿಲ್ಲ. ಇನ್ನಾದರೂ ಸ್ವಚ್ಛತೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹ.
Related Articles
Advertisement