ಬೆಂಗಳೂರು: ಪ್ರಜ್ಞಾವಂತ ಶಿಕ್ಷಕರ ಕೊರತೆಯಿಂದ ರಾಜ್ಯದ ಶಿಕ್ಷಣ ವ್ಯವಸ್ಥೆ ಹದಗೆಡುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಕಳವಳ ವ್ಯಕ್ತಪಡಿಸಿದರು.
ಬನಶಂಕರಿಯ 6ನೇ ಹಂತದ 8ನೇ ಬ್ಲಾಕ್‌ನಲ್ಲಿ ಮಂಗಳವಾರ ರಾಷ್ಟ್ರೊತ್ಥಾನ ಪರಿಷತ್‌ನ “ತಪಸ್’ ಯೋಜನೆಯಡಿ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಗುಣಮಟ್ಟದ ಶಾಲಾ-ಕಾಲೇಜುಗಳಿಗೆ ಕೊರತೆ ಇಲ್ಲ. ಆದರೆ, ಪ್ರಜ್ಞಾವಂತ ಶಿಕ್ಷಕರ ಅಭಾವವಿದೆ. ಇದರಿಂದ ಶಿಕ್ಷಣ ವ್ಯವಸ್ಥೆಯೂ ಹಾಳಾಗುತ್ತಿದೆ ಎಂದು ಹೇಳಿದರು.
ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅಗತ್ಯ ಆಧುನಿಕ ಸೌಲಭ್ಯ ನೀಡುತ್ತಿವೆ. ಆದರೆ, ಶಿಕ್ಷಕರು ಸಮರ್ಥವಾಗಿ ಬೋಧನೆ ಮಾಡುತ್ತಿಲ್ಲ. ಹೀಗಾಗಿ ಪ್ರತಿಭಾವಂತ ಮಕ್ಕಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಷ್ಟ್ರೊàತ್ಥಾನ ಪರಿಷತ್ ಜನರಲ್ಲಿ ಧರ್ಮ ಹಾಗೂ ರಾಷ್ಟ್ರ ಪ್ರಜ್ಞೆ ಬೆಳೆಸುವ ಉತ್ತಮ ಕಾರ್ಯದ ಜತೆಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ ಎಂದು ಶ್ಲಾ ಸಿದರು. ಉತ್ತರಾಧಿ ಮಠದ ಸತ್ಯಾತ್ಮತೀರ್ಥ ಸ್ವಾಮೀಜಿ ಮಾತನಾಡಿ, ದೈವಿ ಶಕ್ತಿ ಜತೆಗೆ ಸ್ವಪ್ರಯತ್ನ ಇದ್ದಾಗ ಯಶಸ್ಸು ಲಭಿಸುತ್ತದೆ. ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶ ಸದುಪಯೋಪ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೆಸೊನೆನ್ಸ್ ಎಜುವೆನcರ್ ವ್ಯವಸ್ಥಾಪಕ ನಿರ್ದೇಶಕ ಆರ್.ಕೆ. ವರ್ಮಾ, ಗ್ಲೋಬಲ್ ಎಡ್ಜ್ ಸಾಫ್ಟ್‌ವೇರ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಪಿ. ಕುಮಾರ್, ರಾಷ್ಟ್ರೊàತ್ಥಾನ ಪರಿಷತ್ ಕಾರ್ಯದರ್ಶಿ ಎನ್. ದಿನೇಶ್ ಹೆಗ್ಡೆ ಉಪಸ್ಥಿತರಿದ್ದರು.
ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜತೆಗೆ ಮಾಧ್ಯಮವೂ ಸಂವಿಧಾನದ ನಾಲ್ಕನೇ ಅಂಗವಾಗಿದೆ. ವಿಧಾನ ಸೌಧದ ಒಳಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿಲು ಸರ್ಕಾರ ಮುಂದಾದರೆ ರಾಜ್ಯವ್ಯಾಪಿ ಬೃಹತ್ ಹೋರಾಟ ನಡೆಸಲಿದ್ದೇÊ.
-ಬಿ.ಎಸ್.ಯಡಿಯೂರಪ್ಪ