Advertisement

ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ಕೊರತೆ

07:06 AM Jun 25, 2019 | Team Udayavani |

ಬೆಂಗಳೂರು: “ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ಕೊರತೆ ಕಾಣುತ್ತಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಇಬ್ಬರೂ ಸೇರಿ ಸರ್ಕಾರದಲ್ಲಿ ಸಮನ್ವಯತೆ ತರಬೇಕು’ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಕೆ. ರೆಹಮಾನ್‌ ಖಾನ್‌ ಹೇಳಿದ್ದಾರೆ.

Advertisement

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆ ಸೋಲಿಗೆ ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ. ಬೇರೆಯವರು ತಮ್ಮ ಜವಾಬ್ದಾರಿ ನಿರ್ವಹಿಸಲಿ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರ ನಡೆಸುವುದು ಹೇಗೆ ಎಂದು ಯುಪಿಎ ಅವಧಿಯನ್ನು ನೋಡಿ ಕಲಿಯಲಿ. ಮನಮೋಹನ್‌ ಸಿಂಗ್‌ ನೇತೃತ್ವದಲ್ಲಿ ಯುಪಿಎ ಕೇಂದ್ರದಲ್ಲಿ ಹತ್ತು ವರ್ಷ ಆಡಳಿತ ನಡೆಸಿದ್ದೇವೆ. ಅದನ್ನು ರಾಜ್ಯದ ಮೈತ್ರಿ ಸರ್ಕಾರ ನಾಯಕರು ನೋಡಿ ಕಲಿಯಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಧ್ಯಂತರ ಚುನಾವಣೆಗಳು ಬರುತ್ತವೆ, ಹೋಗುತ್ತವೆ. ಮೈತ್ರಿಯನ್ನು ಸರಿಯಾಗಿ ನಡೆಸಿಕೊಂಡು ಹೋದರೆ, ಮಧ್ಯಂತರ ಚುನಾವಣೆಯ ಅಗತ್ಯವಿಲ್ಲ ಎಂದರು.

ಮೈತ್ರಿಯಿಂದಲೇ ಲೋಕಸಭೆ ಚುನಾವಣೆಯಲ್ಲಿ ಸೋಲಾಯಿತು ಎಂದು ಈಗ ಹೇಳುವುದು ಸರಿಯಲ್ಲ. ಮೈತ್ರಿಯಾದಾಗಲೇ ಬೇಡ ಎಂದು ಹೇಳಬಹುದಿತ್ತು. ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮೈತ್ರಿ ಆಗದಿರುವುದು ಸೋಲಿಗೆ ಕಾರಣ ಇರಬಹುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next