Advertisement

152 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ

11:50 PM Oct 16, 2023 | Team Udayavani |

ಬೆಂಗಳೂರು: ರಾಜ್ಯದ ಬಹುಪಾಲು ತಾಲೂಕುಗಳಲ್ಲಿ ಮಳೆ ಕೊರತೆಯಾಗಿದ್ದು, 36 ತಾಲೂಕುಗಳ 100 ಗ್ರಾಮ ಪಂಚಾಯತ್‌ಗಳಲ್ಲಿನ 152 ಗ್ರಾಮಗಳು ಕುಡಿಯುವ ನೀರಿನ ಅಭಾವ ಎದುರಿಸುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

Advertisement

ಗ್ರಾಮೀಣ ಪ್ರದೇಶಗಳಲ್ಲಿನ ನೀರು ಸರಬರಾಜು ಪರಿಸ್ಥಿತಿಯ ಕುರಿತು ಸೋಮವಾರ ವಿಕಾಸಸೌಧದಲ್ಲಿ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ರಾಜ್ಯದ 36 ತಾಲೂಕುಗಳ 100 ಗ್ರಾಮ ಪಂಚಾಯತ್‌ಗಳ 152 ಗ್ರಾಮಗಳು ಕುಡಿಯುವ ನೀರಿನ ತೀವ್ರ ಅಭಾವ ಎದುರಿಸುತ್ತಿದ್ದು ತೊಂದರೆಗೀಡಾಗಿರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದಿದ್ದಾರೆ.

ಈ ಪೈಕಿ 22 ಗ್ರಾಮಗಳಿಗೆ ಇಲಾಖೆಯ ಟ್ಯಾಂಕರ್‌ ಹಾಗೂ 16 ಗ್ರಾಮಗಳಿಗೆ ಬಾಡಿಗೆ ಆಧಾರದಲ್ಲಿ ಪಡೆಯಲಾಗಿರುವ ಟ್ಯಾಂಕರ್‌ ಬಳಸಲಾಗುತ್ತಿದ್ದು, ಪ್ರತಿ ಟ್ಯಾಂಕರ್‌ ಸರಾಸರಿ ಪ್ರತಿ ನಿತ್ಯ 17 ಟ್ರಿಪ್‌ ಮೂಲಕ ನೀರು ಸರಬರಾಜು ಮಾಡುತ್ತಿವೆ. 142 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಈ ಮೂಲಕ 130 ಗ್ರಾಮಗಳಿಗೆ ನೀರು ಸರಬರಾಜಾಗುತ್ತಿದೆ ಎಂದು ವಿವರಿಸಿದರು.
ಗ್ರಾಮೀಣ ನೀರು ಸರಬರಾಜು ವ್ಯವಸ್ಥೆ ಮೇಲೆ ನಿಗಾ ಇರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದ್ದು, ಪ್ರತಿ ವಾರಾಂತ್ಯದಲ್ಲಿ ಜಿಲ್ಲೆಯ ಅಧಿಕಾರಿಗಳು ಕಳುಹಿಸುವ ಮಾಹಿತಿ ಆಧರಿಸಿ ಸಭೆ ನಡೆಸುವುದಾಗಿ ಹೇಳಿದ್ದಾರೆ. ಗ್ರಾಮೀಣ ನೀರು ಸರಬರಾಜು ಮಾಡುವಲ್ಲಿ ತೊಂದರೆಯುಂಟಾದಲ್ಲಿ ತತ್‌ಕ್ಷಣವೇ ತಮ್ಮ ಗಮನಕ್ಕೆ ತರಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next