Advertisement
ಆವರಣ ಗೋಡೆ, ಆಟದ ಮೈದಾನ ಇಲ್ಲದಿರುವ ಶಾಲೆಗಳೇ ಹೆಚ್ಚಿವೆ. ಶೌಚಾಲಯಗಳು ಹೆಸರಿಗೆ ಮಾತ್ರ ನಿರ್ಮಿಸದಂತಿವೆ. ಆದರೆ ಬಳಕೆಯಾಗುತ್ತಿಲ್ಲ. ಕೆಲವೆಡೆ ನೀರಿನ ಸಮಸ್ಯೆಯಿಂದ ಬಂದ್ ಮಾಡಲಾಗಿದೆ. ಹಲವೆಡೆ ಬಾಲಕರು ಬಯಲಿಗೆ ತೆರಳುತ್ತಿರುವುದು ತಪ್ಪಿಲ್ಲ.
Related Articles
Advertisement
ಏಕೋಪಾಧ್ಯಾಯ ಶಾಲೆ: ಹಿರೇವಂಕಲಕುಂಟಾ ಭಾಗದ ಬಹುತೇಕ ಶಾಲೆಗಳಲ್ಲಿ ಸುಮಾರು 200ರಿಂದ 600ಕ್ಕೂ ಹೆಚ್ಚು ಮಕ್ಕಳು ಕಲಿಯುತ್ತಿದ್ದಾರೆ. ಆದರೇ ಖಾಯಂ ಶಿಕ್ಷಕರು ಇಲ್ಲದೇ ಏಕೋಪಾಧ್ಯಾಯ ಶಾಲೆಗಳು ಹೆಚ್ಚಾಗಿ ಕಾರ್ಯನಿರ್ವಹಣೆ ಮಾಡುತ್ತಿವೆ. ಮಕ್ಕಳ ಗುಣಾತ್ಮಕ ಶಿಕ್ಷಣದ ದೃಷ್ಟಿಯಿಂದ ಶಿಕ್ಷಕರನ್ನು ನಿಯೋಜನೆ ಮಾಡಬೇಕು ಎಂಬುದು ಆಗ್ರಹವಾಗಿದೆ.
ಶಿಕ್ಷಕರ ಕೊರತೆ ಇದೆ. ಪ್ರಮುಖವಾಗಿ ಇಂಗ್ಲೀಷ್ ಶಿಕ್ಷಕರಿಲ್ಲ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಭರ್ತಿಯಾಗಬೇಕು. ಕೋವಿಡ್‌ನಿಂದ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿಲ್ಲ, ಈ ಬಗ್ಗೆ ಅಧಿಕಾರಿಗಳು ಗಮನಹರಿಸಿ ಶಾಲೆಗೆ ಶಿಕ್ಷಕರನ್ನು ನೇಮಿಸಬೇಕು. –ಹನುಮಪ್ಪ ಗುರಿಕಾರ್, ಲಿಂಗನಬಂಡಿ ಶಾಲೆ ಎಸ್‌ಡಿಎಂಸಿ ಅಧ್ಯಕ್ಷ
ಗ್ರಾಪಂ ವತಿಯಿಂದ ನರೇಗಾ ಯೋಜನೆಯಡಿ ಕಾಂಪೌಂಡ್, ಮಳೆನೀರು ಕೊಯ್ಲು, ನೀರಿನ ತೊಟ್ಟಿ, ಭೋಜನಾಲಯಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ತಾಲೂಕಿನ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ತಾಲೂಕಿನಲ್ಲಿ 200ಕ್ಕೂ ಹೆಚ್ಚು ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದು, ಕಟ್ಟಡಗಳು ಪ್ರಗತಿಯಲ್ಲಿವೆ. –ಮೌನೇಶ ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ
ತಾಲೂಕಿನಲ್ಲಿ ಶಾಲೆಗಳ ಅಭಿವೃದ್ಧಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಸರಕಾರಿ ಶಾಲೆಗಳ ಅಭಿವೃದ್ಧಿ ಬಗ್ಗೆ ಕೈಚೆಲ್ಲಿ ಕುಳಿತಿರುವುದು ನಿಜಕ್ಕೂ ವಿಪಯಾರ್ಸದ ಸಂಗತಿ. ಸರಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ ಎಂದು ಹೇಳುವ ಸರಕಾರ, ಶಾಲೆಗಳ ಆವ್ಯವಸ್ಥೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಸಯಲ್ಲ. ಕಾಂಪೌಂಡ್, ಕೊಠಡಿ ಕೊರತೆ, ಶಿಕ್ಷಕರ ಕೊರತೆ ಹೀಗೆ ಹತ್ತು ಹಲವಾರು ಸಮಸ್ಯೆಗಳಿವೆ. ತಾಲೂಕಿನಲ್ಲಿ ಶೈಕ್ಷಣಿಕ ಕ್ಷೇತ್ರ ಹಿಂದುಳಿದಿದೆ. –ಹುಲಗಪ್ಪ ಬಂಡಿವಡ್ಡರ, ಗ್ರಾಪಂ ಮಾಜಿ ಸದಸ್ಯ
-ಮಲ್ಲಪ್ಪ ಮಾಟರಂಗಿ