Advertisement
ಕೊಪ್ಪ ಕೇಂದ್ರದಿಂದ 3 ಕಿ.ಮೀ. ಅಂತರದಲ್ಲಿರುವ ಹರಳಕೆರೆ ಗ್ರಾಮದಲ್ಲಿ 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಯಿದ್ದು, 1300 ಮಂದಿ ಮತದಾರರನ್ನು ಹೊಂದಿರುವ ಗ್ರಾಮದಲ್ಲಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಅವ್ಯವಸ್ಥೆ ಹತ್ತು ಹಲವು ಸಮಸ್ಯೆಗಳನ್ನು ಹಾಸಿ ಮಲಗಿದ್ದರೂ, ಇದುವರೆವಿಗೂ ಕ್ರಮವಹಿಸದಿ ರುವುದು ಸ್ಥಳೀಯರ ಟೀಕೆಗೆ ಗುರಿಯಾಗಿದೆ.
Related Articles
Advertisement
ಚುನಾವಣೆ ಬಳಿಕ ಇತ್ತ ತಲೆ ಹಾಕದ ನಾಯಕರು: ಕೇವಲ ಚುನಾವಣೆ ಸಂದರ್ಭದಲ್ಲಿ ಆಗಮಿಸುವ ರಾಜಕೀಯ ಮುಖಂಡರು ತಮ್ಮ ಗ್ರಾಮದ ಹಲವು ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿ, ತೆರಳುವ ನಾಯಕರು ಚುನಾವಣೆ ಮುಗಿದ ಬಳಿಕ ಇತ್ತ ತಲೆ ಹಾಕದೆ ಕೇವಲ ಕಾಟಾಚಾರಕಷ್ಟೇ ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡಿದ್ದಾರೆ. ಕೇವಲ ಮುಖಂಡರಿಗಷ್ಟೇ ಮಾತಿಗೆ ಮಣೆಹಾಕಿ, ಸ್ಥಳದಿಂದ ತೆರಳುತ್ತಿರುವ ಪ್ರಸಂಗಗಳು ಕಳೆದ ಹಲವು ವರ್ಷಗಳಿಂದಲೂ ನಿರಂತರವಾಗಿ ನಡೆಯುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಸೌಲಭ್ಯಕ್ಕೆ ಅಲೆದಾಡುವ ಸ್ಥಿತಿ ನಿರ್ಮಾಣ: ಕರ್ತವ್ಯ ನಿರತ ಪಿಡಿಒ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಸಾರ್ವಜನಿಕರ ಮತ್ತು ಗ್ರಾಮದ ಸ್ವತ್ಛತೆಗೆ ಆದ್ಯತೆ ನೀಡದೆ, ಕೇವಲ ಕಚೇರಿಗಷ್ಟೇ ಸೀಮಿತವಾಗಿದ್ದು, ಗ್ರಾಮದಲ್ಲಿ ಕೂಲಿ ಕಾರ್ಮಿಕರಿದ್ದು ಪ್ರತಿನಿತ್ಯ ಕೂಲಿಗೆ ತೆರಳಿದರಷ್ಟೇ ದಿನದ ಬದುಕನ್ನು ದೂಡಬೇಕಾದ ಅನಿವಾರ್ಯವಿದೆ. ಈ ನಿಟ್ಟಿನಲ್ಲಿಯೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಗ್ರಾಪಂ ಕಚೇರಿಗೆ ಅಲೆದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದೆಲ್ಲೆಡೆ ಕಂಡು ಬಂದಿರುವ ಹತ್ತು ಹಲವು ಸಮಸ್ಯೆಗಳನ್ನು ಪಿಡಿಒ ಮತ್ತು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಚರ್ಚಿಸಿ, ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಮಾದರಿ ಗ್ರಾಮ ವನ್ನಾಗಿಸಬೇಕೆಂಬುದೇ ಸ್ಥಳೀಯರ ಆಗ್ರಹವಾಗಿದೆ.
ಹಲವು ವರ್ಷದಿಂದ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ ಬಳಕೆ ಮಾಡಿಕೊಂಡು ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ರಸ್ತೆ ಡಾಂಬರೀಕರಣಕ್ಕೆ ಕ್ರಮವಹಿಸಬೇಕಾಗಿದೆ. ● ರಾಜು, ಹರಳಕೆರೆ
ತಗ್ಗಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ, ಈಗಾಗಲೇ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಗ್ರಾಮದ ಸ್ವತ್ಛತೆ ಮತ್ತು ಮೂಲ ಸೌಲಭ್ಯಗಳನ್ನು ಕಲ್ಪಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಂಡು ಪ್ರಸಕ್ತ ವರ್ಷ ನರೇಗಾ ಅನುದಾನವನ್ನು ಬಳಕೆ ಮಾಡಿಕೊಂಡು ಗ್ರಾಮಾಭಿವೃದ್ಧಿಗೆ ಕ್ರಮವಹಿಸಲಾಗಿದೆ. – ಸಚಿನ್, ಪಿಡಿಒ, ತಗ್ಗಹಳ್ಳಿ ಗ್ರಾಪಂ
-ಎಸ್.ಪುಟ್ಟಸ್ವಾಮಿ