Advertisement
ಪಾಲಿಕೆ ವ್ಯಾಪ್ತಿಯಲ್ಲಿ 10 ಸಾವಿರ ಜನರಿಗೆ ಸೋಂಕು ದೃಢಪಟ್ಟರೂ, ಇವರಲ್ಲಿ 1,500 ಜನರಿಗೆ ಹಾಸಿಗೆ ಅವಶ್ಯವಿದೆ. ನಗರದಲ್ಲಿ ಈಗಾಗಲೇ 10 ಸಾವಿರಕ್ಕಿಂತ ಹೆಚ್ಚು ಜನರಿಗೆ ನಿತ್ಯ ಕೋವಿಡ್ ದೃಢಪಡುತ್ತಿದೆ. ಅಂದಾಜು 250ಕ್ಕೂ ಹೆಚ್ಚು ಜನ ಐಸಿಯು (ತುರ್ತು ಚಿಕಿತ್ಸಾ ಘಟಕದಲ್ಲಿ)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಐಸಿಯು ಸೇರ್ಪಡೆ ಆಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ವೇಳೆ ಆಕ್ಸಿಜನ್ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವುದು ಆತಂಕ ಮೂಡಿಸಿದೆ ಎನ್ನುತ್ತಾರೆ ವೈದ್ಯರು.
Related Articles
Advertisement
ನಗರದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಎಲ್ಲ ಸಾರ್ವಜನಿಕ ರಜೆಗಳನ್ನು ರದ್ದು ಮಾಡಿ ಬಿಬಿಎಂಪಿ ಮುಖ್ಯ ಆಯುಕ್ತ ಆದೇಶ ಮಾಡಿದ್ದಾರೆ. ನಗರದಲ್ಲಿ ಸೋಂಕು ಪರಿಸ್ಥಿತಿ ನಿಯಂತ್ರಣ ಮೀರುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣದಲ್ಲಿ ಸಕ್ರಿಯರಾಗಿರುವ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಾವುದೇ ಕಾರಣಕ್ಕೂ ಅವರ ಅಧಿಕಾರದ ಕೇಂದ್ರ ಸ್ಥಾನ ಬಿಟ್ಟು ಬೇರೆ ಎಲ್ಲಿಯೂ ಹೋಗದಂತೆ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಯನ್ನು ಚಾಲ್ತಿಯಲ್ಲಿ ಇರಿಸಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ಅಲ್ಲದೆ, ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ, ಕೂಡಲೇ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.
ತೆರೆದ ಪ್ರದೇಶದಲ್ಲಿ ಸೋಂಕು ಹಬ್ಬದು :
ಜನ ಹೆಚ್ಚು ಸೇರುವ ಪ್ರದೇಶದಲ್ಲಿ ಕೋವಿಡ್ ಸೋಂಕು ವೇಗವಾಗಿ ಹಬ್ಬುತ್ತದೆ. ರೆಸ್ಟೋರೆಂಟ್, ಬಾರ್‌ಗಳಲ್ಲಿ ಕೇವಲ ಪಾರ್ಸಲ್‌ಗೆ ಅವಕಾಶ ನೀಡಲಾಗಿದೆ. ಉದ್ಯಾನ ಮತ್ತು ಮೈದಾನದಂತಹತೆರೆದ ಪ್ರದೇಶದಲ್ಲಿ ಕೊರೊನಾ ಹಬ್ಬುವುದಿಲ್ಲ. ಹಾಗಾಗಿ, ಆ ಪ್ರದೇಶಗಳಲ್ಲಿ ಹೆಚ್ಚು ಕಟ್ಟುನಿಟ್ಟಿ ನಿರ್ಬಂಧ ಹೇರಿಲ್ಲ ಎಂದು ಮಾಹಿತಿ ನೀಡಿದರು.
ಸಿಲಿಂಡರ್ ಕೊರತೆ ಇದೆ: ಮುಖ್ಯ ಆಯುಕ್ತ ಗುಪ್ತ : ಪಾಲಿಕೆ ವ್ಯಾಪ್ತಿಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಲಭ್ಯತೆ ಕಡಿಮೆ ಇದ್ದು, ಸಿಲಿಂಡರ್‌ಗಳ ಕೊರತೆಯೂ ಇದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದರು. ನಗರದಲ್ಲಿ ಆಕ್ಸಿಜನ್ ಕೊರತೆಯಿಂದರೋಗಿಗಳು ಪರದಾಡುತ್ತಿದ್ದು, ಆಕ್ಸಿಜನ್‌ಪೂರೈಕೆ ಹೆಚ್ಚಿಸುವ ಸಂಬಂಧ ಸರ್ಕಾರನಡೆಸಿದ ಸಭೆ ಬಳಿಕ ಮಾತನಾಡಿದರು. ನಗರದಲ್ಲಿ ಕೋವಿಡ್
ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಜತೆಗೆ ಆಕ್ಸಿಜನ್ ಅಭಾವ ಸೃಷ್ಟಿಯಾಗಿದ್ದು, ಇದರ ಬೆನ್ನಲ್ಲೇ ಸಿಲಿಂಡರ್‌ಗಳ ಕೊರತೆಯೂ ಶುರುವಾಗಿದೆ. ಹೀಗಾಗಿ, ಬೇರೆ ರಾಜ್ಯಗಳಿಂದ ಸಿಲಿಂಡರ್ ಪಡೆದುಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದರು.
ಹಾಸಿಗೆ ಸಮಸ್ಯೆ ನೀಗಿಸುವ ನಿಟ್ಟಿನಲ್ಲೂ ಆಸ್ಪತ್ರೆಗಳಿಂದ ಹಾಸಿಗೆ ಪಡೆದುಕೊಳ್ಳುವುದರ ಜೊತೆಗೆ ಬೇರೆ ಕ್ರಮಗಳ ಬಗ್ಗೆಯೂ ಚಿಂತನೆ ನಡೆಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು ಹೋಟೆಲ್ ಜತೆ ಒಪ್ಪಂದ ಮಾಡಿಕೊಳ್ಳಲು ಇಚ್ಛಿಸಿದರೆ, ಹೋಟೆಲನ್ನು ಕೋವಿಡ್ ಆರೈಕೆ ಕೇಂದ್ರ ಅಥವಾ ತಾತ್ಕಾಲಿಕ ಆಸ್ಪತ್ರೆಯಾಗಿ ಪರಿವರ್ತಿಸಲಾಗುವುದು. ಖಾಸಗಿ ಆಸ್ಪತ್ರೆಗಳಿಂದ ಹಾಸಿಗೆ ಪಡೆಯಲು ಪಾಲಿಕೆ ಮತ್ತು ಪೊಲೀಸರನ್ನು ಒಳಗೊಂಡ ತಂಡ ರಚಿಸಲಾಗಿದ್ದು, ಆಸ್ಪತ್ರೆಗಳಲ್ಲಿ ಪರಿಶೀಲನೆನಡೆಸುತ್ತಿದ್ದಾರೆ. 7500ರಿಂದ 11 ಸಾವಿರಕ್ಕೆ ಹಾಸಿಗೆಗಳ ಸಂಖ್ಯೆ ಹೆಚ್ಚಿಸಬೇಕಿದೆ ಎಂದರು.