ಇದು ಕೇವಲ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರ ಸಮಸ್ಯೆ ಯಲ್ಲ, ವಿಶ್ವವಿದ್ಯಾಲಯಗಳಲ್ಲಿ ಸಂಶೋಧನೆ ನಡೆಸುತ್ತಿರುವ ಅಭ್ಯರ್ಥಿಗಳಿಗೂ ಇದೇ ಸಮಸ್ಯೆ ಎದುರಾಗುತ್ತಿದೆ.
Advertisement
ಕೋವಿಡ್ 19ದಿಂದಾಗಿ ಅಧ್ಯಯನಕ್ಕೆ ಪೂರಕವಾಗಿರುವ ಪುಸ್ತಕಗಳನ್ನು ಖರೀದಿ ಸಲು ಸಾಧ್ಯವಾಗುತ್ತಿಲ್ಲ. ಪುಸ್ತಕದ ಮಳಿಗೆಗಳು ಬಂದ್ ಆಗಿದೆ. ಅಲ್ಲದೆ, ಮಾರ್ಗದರ್ಶಕರಲ್ಲಿರುವ ಅಧ್ಯಯನ ಸಾಮಗ್ರಿಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸಂಶೋಧನಾಶೀಲ ಅಭ್ಯರ್ಥಿಗಳು ನೋವು ತೋಡಿಕೊಂಡಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವವರಿಗೆ ಗ್ರಂಥಾಲಯ ಒಂದು ರೀತಿಯ ಶಕ್ತಿಕೇಂದ್ರ. ದಿನಪತ್ರಿಕೆ, ವಾರಪತ್ರಿಕೆ, ಸಾಮಾನ್ಯ ಜ್ಞಾನದ ಪುಸ್ತಕಗಳು ಹೀಗೆ ಅಧ್ಯಯನಕ್ಕೆ ಅವಶ್ಯವಿರುವ ಅನೇಕ ರೀತಿಯ ಸಾಮಗ್ರಿಗಳು ಇಲ್ಲಿ ಲಭ್ಯವಿರುತ್ತವೆ. ಈಗ ಗ್ರಂಥಾಲಯಗಳು ಬಾಗಿಲು ಮುಚ್ಚಿ ರುವುದರಿಂದ ಅಧ್ಯಯನ ಸಾಮಗ್ರಿ ಪಡೆಯುವುದೇ ಕಷ್ಟವಾಗಿದೆ ಎಂದು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ. ಗ್ರಂಥಾಲಯ ಇಲಾಖೆಯಿಂದ ಡಿಜಿಟಲ್ ವ್ಯವಸ್ಥೆ ಮಾಡಲಾಗಿದೆ. ಇಲಾಖೆಯ ವೆಬ್‌ಸೈಟ್ ಮೂಲಕ ಸುಲಭವಾಗಿ ಪುಸ್ತಕಗಳನ್ನು ಪಡೆದು ಓದಬಹುದಾಗಿದೆ. ಅಲ್ಲದೆ, ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಪುಸ್ತಕಗಳನ್ನು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಓದಬಹುದಾಗಿದೆ.
– ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವರು