Advertisement

ಯೂರಿಯಾ ಪೂರೈಕೆಯಲ್ಲಿ ಕೃಷಿ ಇಲಾಖೆ ವಿಫಲ

06:17 PM Aug 25, 2020 | Suhan S |

ಜಗಳೂರು: ರೈತರಿಗೆ ಸಮರ್ಪಕವಾಗಿ ಯೂರಿಯಾ ಗೊಬ್ಬರ ಮತ್ತು ಔಷಧ ಪೂರೈಕೆ ಮಾಡುವಲ್ಲಿ ಕೃಷಿ ಇಲಾಖೆಯವರು ವಿಫಲರಾಗಿದ್ದಾರೆ ಎಂದು ಆರೋಪಿ ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದ ತಾಲೂಕು ಘಟಕದಿಂದ ಸೋಮವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

Advertisement

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಲ್ಲನಹೊಳೆ ಚಿರಂಜೀವಿ ಮಾತನಾಡಿ, ಜಗಳೂರು ತಾಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಬೆಳೆಗಳಿಗೆ ಬೇಕಾದ ಯೂರಿಯಾ ಗೊಬ್ಬರವಿಲ್ಲದೆ ಅಲೆದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಾಲೂಕಿನ ಅಂಗಡಿಗಳಲ್ಲಿ ಯೂರಿಯಾ ದೊರೆಯುತ್ತಿಲ್ಲ. ಹೀಗಾಗಿ ಬೇರೆ ಜಿಲ್ಲೆಗೆ ಹೋಗಿ ಹೆಚ್ಚಿನ ಬೆಲೆ ನೀಡಿ ತರಬೇಕಾಗಿದೆ. ಕಸಬಾ ಹೋಬಳಿಯಲ್ಲಿ ಮೆಕ್ಕೆಜೋಳಕ್ಕೆ ಹುಳು ಬಾದೆ ಪ್ರಾರಂಭವಾಗಿದೆ. ಆದರೂ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ಗಂಗಾಧರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ್‌, ತಾಲೂಕು ಕಾರ್ಯದರ್ಶಿ ದೊಣ್ಣೆಹಳ್ಳಿ ಲೋಕೇಶ್‌, ಸೊಕ್ಕೆ ಹೋಬಳಿ ಕಾರ್ಯದರ್ಶಿ ಕಸವನಹಳ್ಳಿ ನಾಗರಾಜ್‌, ಕಸಬಾ ಹೋಬಳಿ ಅಧ್ಯಕ್ಷ ಎಂ. ಶರಣಪ್ಪ, ಬಿಳಿಚೋಡು ಹೋಬಳಿ ಅಧ್ಯಕ್ಷ ಪ್ರಹ್ಲಾದಪ್ಪ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next