Advertisement
ಸೋಮವಾರ ಜಿ.ಪಂ. ಸಭಾಂಗಣ ದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಕ್ರಿಯಾ ಯೋಜನೆ ರೂಪಿಸುವಾಗ ಸ್ಥಳೀಯ ಶಾಸಕರ ಸಲಹೆಗಳಿಗೆ ಆದ್ಯತೆ ನೀಡುವಂತೆ ತಿಳಿಸಿದರು. ಕೆರೆ ಅಭಿವೃದ್ಧಿಗೆ ಅನುಮತಿ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದು ಹೇಳಿದರು.
ಕುಂದಾಪುರದ ಒಳಚರಂಡಿ ಯೋಜನೆ 2017ಕ್ಕೆ ಮುಕ್ತಾಯಗೊಳ್ಳಬೇಕಾಗಿದ್ದರೂ ಇದುವರೆಗೆ ಮುಕ್ತಾಯಗೊಳ್ಳದ ಕುರಿತು ಅಸಮಾಧಾನ ವ್ಯಕ್ತ ಪಡಿಸಿದರು. ಕಾರ್ಕಳದ ಒಳಚರಂಡಿ ಯೋಜನೆಗಳನ್ನು ಶೀಘ್ರ ಮುಗಿಸುವಂತೆ ತಿಳಿಸಿದರು. 14 ವರ್ಷಗಳ ಹಿಂದಿನ ಉಡುಪಿ ನಗರದ ಒಳಚರಂಡಿ ಯೋಜನೆಯನ್ನು ಮರುವಿನ್ಯಾಸ ದೊಂದಿಗೆ ಡಿಪಿಆರ್ ಸಲ್ಲಿಸಿ ಎಂದರು. ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಕೊಲ್ಲೂರಿನಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿರುವ ಒಳಚರಂಡಿ ಮತ್ತು ಕುಡಿಯುವ ನೀರು ಕಾಮಗಾರಿಗಳ ಉದ್ಘಾಟನೆಗೆ ದಿನಾಂಕ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.