Advertisement

ನೀರಿನ ಮೂಲ ಉಳಿಸಿಕೊಳ್ಳಲು ಕೆರೆಕಟ್ಟೆಗಳ ಅಭಿವೃದ್ಧಿ

05:56 PM May 15, 2019 | Suhan S |

ಹಾವೇರಿ: ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಕೆರೆಕಟ್ಟೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಜಲಾಮೃತ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದೆ. ತನ್ಮೂಲಕ ನೈಸರ್ಗಿಕ ಜಲ ಸಂರಕ್ಷಣೆಗೆ ಮಾಡಲು ನಿರ್ಧರಿಸಲಾಗಿದೆ ಎಂದು ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ ಹೇಳಿದರು.

Advertisement

ತಾಲೂಕಿನ ಕರಜಗಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜಗಾರ್‌ ದಿನಾಚರಣೆ ಆಚರಿಸಿ ಕಚ್ಚಾ ಕಾಲುವೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.

ಈ ವರ್ಷ ತಾಲೂಕಿನಲ್ಲಿ ನೈಸರ್ಗಿಕ ಜಲ ಸಂರಕ್ಷಣೆಗೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಿದ್ದು, ಇದರಿಂದ ಎರಡು ಬಗೆಯ ಪ್ರಯೋಜನವಾಗಲಿದೆ. ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಒಂದೆಡೆಯಾದರೆ ಮತ್ತೂಂದಡೆ ಹೆಚ್ಚು ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಕೊಟ್ಟಂತಾಗಲಿದೆ. ಅಲ್ಲದೇ ಕೂಲಿಕಾರರು ಉದ್ಯೋಗಕ್ಕಾಗಿ ಬೇರೆಡೆ ವಲಸೆ ಹೋಗುವುದನ್ನು ತಪ್ಪಿಸಿದಂತಾಗುತ್ತದೆ ಎಂದರು.

ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕು ಪಂಚಾಯಿತಿ ಬದ್ಧವಾಗಿದ್ದು, ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲ್ಗೊಳ್ಳುವಂಥ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು. ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಪದೇ ಪದೆ ಬರ ಪರಿಸ್ಥಿತಿ ಎದುರಿಸುತ್ತಿದ್ದು ಜನ, ಜನಾವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲದ ಮೂಲಗಳು ಕಡಿಯಾಗುತ್ತಿದ್ದು, ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ. ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರರ್ಜಲ ಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರು ಉದ್ಯೋಗ ಅರಸಿಕೊಂಡು ನಗರ, ಪಟ್ಟಣಗಳಿಗೆ ವಲಸೆ ಹೋಗುತ್ತಿದ್ದಾರೆ. ಈ ಸಂಕಷ್ಟದ ಪರಿಸ್ಥಿತಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

Advertisement

ತಾಲೂಕು ಪಂಚಾಯತಿಯ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ್‌ ಬೆನ್ನೂರ, ಅಭಿವೃದ್ಧಿ ಅಧಿಕಾರಿ ಲೋಕೇಶ ಪಟ್ಟಣ, ತಾಪಂ ಎಂಜನಿಯರ್‌ ಇಮ್ರಾನಖಾನ್‌, ಸಂಜೀವ ಮೇಗಳಮನಿ ಹಾಗೂ ಗ್ರಾಪಂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next