ಬೆಳಗಾವಿ: ಅಪಾರ ಜನ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರು ಮಂಗಳವಾರ ಶಕ್ತಿ ಪ್ರದರ್ಶನ ನಡೆಸಿ, ಚುನಾವಣಾಧಿಕಾರಿಯಾಗಿರುವ ಆಗಿರುವ ಜಿಲ್ಲಾಧಿಕಾರಿ ಆರ್. ವೆಂಕಟೇಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಗರದ ಛತ್ರಪತಿ ಶಿವಾಜಿ ಮಹಾರಾಜ್ ಹಾಗೂ ಜಗಜ್ಯೋತಿ ಬಸವೇಶ್ವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ಆರಂಭಿಸಿದ ಲಖನ್ ಜಾರಕಿಹೊಳಿ ಅವರು ತೆರೆದ ವಾಹನದಲ್ಲಿ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದರು ಆರಂಭಿಸಿದರು.
ಲಖನ್ ಜಾರಕಿಹೊಳಿ ಅವರು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಗ್ರಾಮ ಪಂಚಾಯತ್, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.
ವಿಧಾನಪರಿಷತ್ ಸದಸ್ಯ ವಿವೇಕರಾವ್ ಪಾಟೀಲ, ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ್ ಪಾಟೀಲ ಸೇರಿದಂತೆ ಅನೇಕರು ಸಾಥ್ ನೀಡಿದರು.