Advertisement

ಕಾಂಗ್ರೆಸ್‌ ಬಿಡಲ್ಲ, ಬಿಜೆಪಿ ಸೇರಲ್ಲ: ಲಖನ್‌

06:40 AM Apr 05, 2018 | Team Udayavani |

ಗೋಕಾಕ: “ಬಿಜೆಪಿಯವರು ನನ್ನನ್ನು ಸಿಎಂ  ಮಾಡುವುದಾಗಿ ಹೇಳಿದರೂ ನಾನು ಬಿಜೆಪಿ ಸೇರ್ಪಡೆಯಾಗುವುದಿಲ್ಲ’ ಎಂದು ಉದ್ಯಮಿ ಲಖನ್‌ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Advertisement

ಬುಧವಾರ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, “ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಬಿಡದಂತೆ ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನದ ಭರವಸೆ ನೀಡಿದ್ದಾರೆ. 

ಹೀಗಾಗಿ ಅವರ ಮಾತಿಗೆ ಬೆಲೆ ಕೊಟ್ಟು ಕಾಂಗ್ರೆಸ್‌ನಲ್ಲೇ ಉಳಿಯುವ ನಿರ್ಧಾರ ಮಾಡಿದ್ದೇನೆ. ಇನ್ನೆರಡು ದಿನಗಳಲ್ಲಿ ಬೆಂಗಳೂರಿಗೆ ತೆರಳಿ ಸಿಎಂ ಜತೆ ಚರ್ಚಿಸುತ್ತೇನೆ. ಬಳಿಕ ನಿರ್ಧಾರ ಪ್ರಕಟಿಸುತ್ತೇನೆ’ ಎಂದರು. ಇದೇ ವೇಳೆ ಮಾತನಾಡಿದ ರಮೇಶ ಜಾರಕಿಹೊಳಿ, ಲಖನ್‌ ಗೋಕಾಕ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next