Advertisement

ಲಖೀಂಪುರ ಹಿಂಸಾಚಾರ: ಪ್ರತಿಭಟನೆ ತೀವ್ರ ಸ್ವರೂಪಕ್ಕೆ; ಅಖಿಲೇಶ್ ವಶಕ್ಕೆ

02:24 PM Oct 04, 2021 | Team Udayavani |

ಲಕ್ನೋ: ರೈತರ ಪ್ರತಿಭಟನೆ ವೇಳೆ ವ್ಯಾಪಕ ಹಿಂಸಾಚಾರಕ್ಕೆ ಗುರಿಯಾಗಿರುವ ಉತ್ತರಪ್ರದೇಶದ ಲಖೀಂಪುರ ಖೇರಿ ಘಟನೆ ಖಂಡಿಸಿ ದೇಶಾದ್ಯಂತ ರೈತ ಸಂಘಟನೆಗಳು ಸೇರಿದಂತೆ ಪ್ರಮುಖ ವಿಪಕ್ಷಗಳು ಸೋಮವಾರ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದೆ. ಸಮಾಜವಾದಿ ಪಕ್ಷದ ಅಧ್ಯಕ್ಷ , ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ರಾಮ್ ಗೋಪಾಲ್ ಯಾದವ್ , ಪ್ರಗತಿಶೀಲ್ ಸಮಾಜವಾದಿ ಪಕ್ಷದ ಸ್ಥಾಪಕ ಶಿವಪಾಲ್ ಯಾದವ್ ಸೇರಿದಂತೆ ಹಲವು ಪ್ರಮುಖ ನಾಯಕರನ್ನು ಲಕ್ನೋ ದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ಪ್ರತಿಭಟನೆ ವೇಳೆ ಸೆಕ್ಷನ್ 144 ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ಅಖಿಲೇಶ್ ಯಾದವ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಮಾಜವಾದಿ ಪಕ್ಷ ಮತ್ತು ಇತರ ಪ್ರಮುಖ ವಿಪಕ್ಷಗಳ ನಾಯಕರನ್ನೂ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲಖೀಂಪುರ ಖೇರಿಯಲ್ಲಿ ರವಿವಾರ ಪ್ರತಿಭಟನ ‌ಕಾರ ರೈತರು ‌ ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆಯಲ್ಲಿಕ ನಿಷ್ಠ 8 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯ ಗೊಂಡಿದ್ದರು. ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉತ್ತರ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ದೇಶಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತೆ ರೈತರಿಗೆ ಸಂಯುಕ್ತ ಕಿಸಾನ್‌ ಮೋರ್ಚಾ ಕರೆ ನೀಡಿದೆ. ಸುಪ್ರೀಂ
ನ್ಯಾಯಮೂರ್ತಿ ನೇತೃತ್ವದಲ್ಲಿ ಘಟನೆ ಬಗ್ಗೆ ತನಿ ಖೆಗೂ ಆ ‌ಗ್ರಹಿಸಿದೆ. ಇದೇ ವೇಳೆ, ಭಾರತೀಯ ಕಿಸಾನ್‌ ಯೂನಿಯನ್‌ ನಾಯಕ ರಾಕೇಶ್‌ ಟಿಕಾಯತ್‌ ಅವರು ಲಖೀಂಪುರಕ್ಕೆ ಆಗಮಿಸಿ ಉನ್ನತ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next