ಶ್ರೀನಗರ್: ಉತ್ತರಪ್ರದೇಶ ಇದೀಗ ಹೊಸ ಜಮ್ಮು-ಕಾಶ್ಮೀರವಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಸೋಮವಾರ (ಅಕ್ಟೋಬರ್ 04) ಟೀಕಿಸಿದ್ದಾರೆ. ಉತ್ತರಪ್ರದೇಶದ ಲಖೀಂಪುರ ಖೇರಿಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇದನ್ನೂ ಓದಿ:ಅಮೃತ್ ನೋನಿ ಸಂಸ್ಥೆಯ ಹೆಸರಿನಲ್ಲಿ ನಕಲಿ ಉತ್ಪನ್ನಗಳ ಮಾರಾಟ: ದೂರು ದಾಖಲು
ಉತ್ತರಪ್ರದೇಶ ಹೊಸ ಜಮ್ಮು-ಕಾಶ್ಮೀರವಾಗಿದೆ ಎಂದು ಟ್ವೀಟ್ ಮಾಡಿರುವ ಒಮರ್ ಅಬ್ದುಲ್ಲಾ, ದಶಕಗಳಿಂದ ಭಯೋತ್ಪಾದನೆ ಮತ್ತು ಹಿಂಸಾಚಾರದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಉತ್ತರಪ್ರದೇಶವನ್ನು ಹೋಲಿಕೆ ಮಾಡಿ ಟೀಕಿಸಿರುವುದಾಗಿ ವರದಿ ವಿವರಿಸಿದೆ.
ಉತ್ತರಪ್ರದೇಶದ ಲಖೀಂಪರ್ ಖೇರಿಯಲ್ಲಿ ಸಂಭವಿಸಿದ ಹಿಂಸಾಚಾರದಲ್ಲಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಈ ಪ್ರತಿಕ್ರಿಯೆ ನೀಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ಪೊಲೀಸರು ಎರಡು ಎಫ್ ಐಆರ್ ದಾಖಲಿಸಿಕೊಂಡಿದ್ದು, ಇದರಲ್ಲಿ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಹಾಗೂ ಇತರರ ಹೆಸರು ಕೂಡಾ ಇದ್ದಿರುವುದಾಗಿ ವರದಿ ತಿಳಿಸಿದೆ.