Advertisement
ಮಾಧ್ಯಮಗಳ ಎದುರು ಮಾತನಾಡಿರುವ ಅವರು, ಲಖಿಂಪುರ್ ಖೇರಿ ಘಟನೆಯು 2022 ರಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಚುನಾವಣಾ ನಿರೀಕ್ಷೆಗಳ ಮೇಲೆ ಯಾವುದೇ ದುಷ್ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
Related Articles
Advertisement
ಇನ್ನು ಬಿಜೆಪಿ ಈಗಾಗಲೇ ಲಖೀಂಪುರ ಘಟನೆಯಿಂದ ಪಕ್ಷಕ್ಕೆ ಆಗಬಹುದಾದ ಹಾನಿಯನ್ನು ನಿಯಂತ್ರಿಸಲು ಹಾಗು ಕ್ರಮ ಕೈಗೊಳ್ಳಲು ಆರಂಭಿಸಿದೆ. ಮತ್ತು ಬೂತ್ ಮಟ್ಟದಲ್ಲಿ ಪರಿಸ್ಥಿತಿಯನ್ನು ವಿವರಿಸಲು ಕಾರ್ಯಕರ್ತರಲ್ಲಿ ಹೇಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
“ಲಖಿಂಪುರ್ ಘಟನೆ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ. ಏಕೆಂದರೆ ಕಾಂಗ್ರೆಸ್ ನಂತಹ ಪಕ್ಷವು ರಾಜ್ಯದಲ್ಲಿ ಅತ್ಯಲ್ಪ ಅಸ್ತಿತ್ವವನ್ನು ಹೊಂದಿದೆ. ಇಂತಹ ಕುತಂತ್ರಗಳು ಚುನಾವಣೆಯಲ್ಲಿ ಕೆಲಸ ಮಾಡುವುದಿಲ್ಲ.” ಎಂದು ಬಿಜೆಪಿ ಪಕ್ಷದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಕೈಗೊಂಡಿರುವ ವಿವಿಧ ಕ್ರಮಗಳ ಬಗ್ಗೆ ಹೇಳುತ್ತಾ ಪಕ್ಷದ ಕಾರ್ಯಕರ್ತರು ರೈತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಕಾಮೇಶ್ವರ್ ಸಿಂಗ್ ಹೇಳಿದರು. ಕಿಸಾನ್ ಮೋರ್ಚಾ, ರೈತರನ್ನು ಒಗ್ಗೂಡಿಸುವ ಅಭಿಯಾನಗಳು ಮತ್ತು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಮತ್ತು ಅದನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.