Advertisement

ನರೇಗಾ ಕಾಮಗಾರಿಗೆ ಲಕ್ಷ ಕೋಟಿ ಮೀಸಲು

04:26 PM May 20, 2020 | Suhan S |

ಗಂಗಾವತಿ: ಕೋವಿಡ್ ಹಿನ್ನೆಲೆಯಲ್ಲಿ ಮಹಾನಗರಗಳಿಂದ ಮರಳಿ ಗ್ರಾಮಗಳಿಗೆ ವಾಪಸ್‌ ಆಗಮಿಸಿರುವ ಕೂಲಿ ಕಾರ್ಮಿಕರಿಗೆ ನರೇಗಾ ಯೋಜನೆಯಡಿ ನಿರಂತರ ಕೂಲಿ ಕೆಲಸ ಕಲ್ಪಿಸಲು ಕೇಂದ್ರ ಸರಕಾರ ಲಕ್ಷ ಕೋಟಿ ರೂ. ಮೀಸಲಿರಿಸಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.

Advertisement

ತಾಲೂಕಿನ ಮಲಕನಮರಡಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ವೈಯಕ್ತಿಕವಾಗಿ ಹೊಲಗಳಲ್ಲಿ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ, ಕಾರ್ಮಿಕರಿಗೆ ನರೇಗಾ ಪ್ರಮಾಣ ವಚನ ಬೋಧಿಸಿ ಅವರು ಮಾತನಾಡಿದರು. ಕೋವಿಡ್ ಮಹಾಮಾರಿ ಜಗತ್ತನ್ನು ಕಾಡುತ್ತಿದೆ. ದೇಶದಲ್ಲೂ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಹರಡಂತೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಜನರು ಸಹ ಸಾಮಾಜಿಕ ಅಂತರ ಕಾಪಾಡಿಕೊಂಡು ವೈರಸ್‌ ಹರಡದಂತೆ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಮಳೆ-ಗಾಳಿಗೆ ಭತ್ತದ ಬೆಳೆ ನಷ್ಟವಾದ ಸಂದರ್ಭದಲ್ಲಿ ಸಂಸದರುಮ ಶಾಸಕರು ಸೇರಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ 45 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಹೂವು, ತೋಟಗಾರಿಕೆ ಬೆಳೆ ಹಾನಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ನೀಡಲಾಗಿದೆ ಎಂದರು.

ಸಂಸದ ಕರಡಿ ಸಂಗಣ್ಣ, ಶಾಸಕ ಪರಣ್ಣ ಮುನವಳ್ಳಿ, ದಡೇಸೂಗೂರು ಬಸವರಾಜ, ಜಿಪಂ ಅಧ್ಯಕ್ಷ ವಿಶ್ವನಾಥ ರಡ್ಡಿ, ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next