Advertisement
ಕೆಲವೇ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿವೆ. ಯೋಜನೆಗಳನ್ನು ಸರ್ಕಾರದ ಪ್ರತಿನಿಧಿಗಳ ಜತೆಗೂಡಿ ರೂಪಿಸಲಾಗಿದೆ. ತಿಂಗಳೊಳಗೆ ಕೆಲಸ ಆರಂಭಗೊಳ್ಳುವ ನಿರೀಕ್ಷೆಯಿದೆ. ನಾವು ಮಠಕ್ಕೆ ವಿಶೇಷ ಅನುದಾನ ಕೇಳಿಲ್ಲ. ಜನೆಗಳನ್ನೇ ಕೇಳಿದ್ದೇವೆ. ಕೇವಲ ಮಠವನ್ನು ಮಾತ್ರ ಯೋಜನೆಗೆ ಗುರುತಿಸಲಾಗಿತ್ತು. ಆದರೆ, ನಾವು ಇಡೀ ಮಂತ್ರಾಲಯವನ್ನು ಯೋಜನೆ ವ್ಯಾಪ್ತಿಗೆ ತರುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಠಕ್ಕೆ ಭೇಟಿನೀಡುವಂತೆ ಮನವಿ ಮಾಡಲಾಗುವುದು ಎಂದರು. ಭಕ್ತರು ಹಾಗೂ ಜಾನುವಾರುಗಳ ಅನುಕೂಲಕ್ಕಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸಮಾನಾಂತರ ಜಲಾಶಯ ನಿರ್ಮಿಸುವ ವಿಚಾರ ಇದೆ. ಈ ಬಗ್ಗೆ ರಾಯಚೂರು ಗ್ರಾಮೀಣ ಶಾಸಕರು ಕೂಡ ಆಸಕ್ತಿ ತೋರಿದ್ದಾರೆ. ಶೀಘ್ರದಲ್ಲೇ ಕರ್ನಾಟಕ, ತೆಲಂಗಾಣ ಮತ್ತು ಕೇಂದ್ರ ಸರ್ಕಾರಗಳಿಗೆ ಈ ಬಗ್ಗೆ ಒತ್ತಾಯ ಮಾಡಲಾಗುವುದು ಎಂದರು. ಸತತ ಬರದಿಂದ ರಾಜ್ಯ ಸಂಪೂರ್ಣ ಸೊರಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು ಎಂದು ಒತ್ತಾಯಿಸಿದರು.
ಶ್ರೀ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಮಠ