Advertisement

Dharmasthala ಜ್ಞಾನ, ವಿಜ್ಞಾನ, ಮಾಹಿತಿಯ ಕಣಜ: ಡಾ| ಹೆಗ್ಗಡೆ

11:37 PM Dec 08, 2023 | Team Udayavani |

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಸ್ತುಪ್ರದರ್ಶನವನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಗಿರೀಶನಂದನ್‌ ಎಂ. ಶುಕ್ರವಾರ ಉದ್ಘಾಟಿಸಿ ಶುಭ ಹಾರೈಸಿದರು.

Advertisement

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲ ಮಳಿಗೆಗಳಿಗೆ ಭೇಟಿ ನೀಡಿ ವೀಕ್ಷಿಸಿ ಬಳಿಕ ಮಾತನಾಡಿ, ವಸ್ತುಪ್ರದರ್ಶನದಲ್ಲಿ ನೋಡಲು, ತಿಳಿಯಲು ಮತ್ತು ಜ್ಞಾನವನ್ನು ವಿಸ್ತರಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಜತೆಗೆ ಮನೋರಂಜನೆಯೂ ಇದೆ. ವಿಶೇಷವಾಗಿ ಸಿರಿ ಮಿಲೆಟ್ಸ್‌ ಪ್ರದರ್ಶಿಸಲಾಗಿದೆ. ಆರೋಗ್ಯ ದೃಷ್ಟಿಯಿಂದಲೂ ವಸ್ತು ಪ್ರದರ್ಶನ ಅನುಕೂಲವಾಗಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.

ಶ್ರದ್ಧಾ ಅಮಿತ್‌ ಉಪಸ್ಥಿತರಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಸಿಒಒ ಅನಿಲ್‌ ಕುಮಾರ್‌, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎಸ್‌. ಸತೀಶ್ಚಂದ್ರ, ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್‌. ಜನಾರ್ದನ, ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಪ್ರಶಾಂತ್‌ ಶೆಟ್ಟಿ, ಹೆಗ್ಗೆಯವರ ಆಪ್ತ ಕಾರ್ಯದರ್ಶಿ ಎ. ವೀರು ಶೆಟ್ಟಿ, ಸಿಡಿಪಿಒ ಪ್ರಿಯಾ ಆಗ್ನೆಸ್‌, ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್‌ ವಿ. ಪಾಯಸ್‌ ಉಪಸ್ಥಿತರಿದ್ದರು.

335 ಮಳಿಗೆಗಳು
ಬ್ಯಾಂಕ್‌ಗಳು, ಜೀವವಿಮೆ, ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಬ್ಯಾಂಕ್‌, ಕೆನರಾ ಬ್ಯಾಂಕ್‌, ಸೆಲ್ಕೋ ಸೋಲಾರ್‌, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಪುಸ್ತಕ ಮಳಿಗೆಗಳು, ರುಡ್‌ಸೆಟ್‌ ಬಜಾರ್‌, ಮಿಲೆಟ್‌ ಸೇರಿದಂತೆ 200ಕ್ಕೂ ಮಿಕ್ಕಿ ಮಳಿಗೆಗಳಿವೆ.

– ರಾತ್ರಿ ಗಂಟೆ 10.30ರ ವರೆಗೆ ವಸ್ತುಪ್ರದರ್ಶನ ವೀಕ್ಷಿಸಲು ಉಚಿತ ಅವಕಾಶವಿದೆ. ಸಂಜೆ 6ರಿಂದ ರಾತ್ರಿ 10 ಗಂಟೆ ವರೆಗೆ ವಸ್ತುಪ್ರದರ್ಶನ ಮಂಟಪದಲ್ಲಿ ಮನೋರಂಜನೆ ಕಾರ್ಯಕ್ರಮಗಳನ್ನು ಆಯೋಜಿಸ ಲಾಗಿದೆ.
– ಕೆಎಸ್ಸಾರ್ಟಿಸಿಯು ರಾಜ್ಯದ ವಿವಿಧ ಊರುಗಳಿಂದ ಧರ್ಮಸ್ಥಳಕ್ಕೆ ವಿಶೇಷ ಬಸ್‌ ಸೌಲಭ್ಯ ಕಲ್ಪಿಸಿದೆ.
– ದೇವಸ್ಥಾನ, ಬೀಡು, ಪ್ರವೇಶ ದ್ವಾರ, ವಸತಿಗೃಹಗಳು, ಮಂಜೂಷಾ ವಸ್ತುಸಂಗ್ರಹಾಲಯ ಹಾಗೂ ವಿವಿಧ ಕಟ್ಟಡಗಳನ್ನು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next