Advertisement

ನೂತನ ಬಸ್ ಗಳ ಲೋಕಾರ್ಪಣೆ ಮಾಡಿದ ಡಿಸಿಎಂ ಲಕ್ಷ್ಮಣ ಸವದಿ

11:27 AM Jan 06, 2020 | Team Udayavani |

ಬೆಳಗಾವಿ: ನಗರ ಕೇಂದ್ರ ಬಸ್ ನಿಲ್ದಾಣದ ಕಾಮಗಾರಿಗಳನ್ನು ಬೇಗನೆ ಪೂರ್ಣಗೊಳಿಸಿ ಜೂನ್ ವೇಳೆಗೆ ಸಾರ್ವಜನಿಕರ ಸೇವೆಗೆ ಸಮರ್ಪಣೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದರು.  ನಗರದ ಬಸ್ ನಿಲ್ದಾಣದಲ್ಲಿ ಸೋಮವಾರ ಒಂಬತ್ತು ನೂತನ ಬಸ್ ಗಳನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿ ನಂತರ ಬಸ್ ನಿಲ್ದಾಣ ಕಾಮಗಾರಿಯ ಪರಿವೀಕ್ಷಣೆ ಕೈಗೊಂಡ ಅವರು, ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ್ ಕವಟಗಿಮಠ, ಶಾಸಕರಾದ ಅನಿಲ್ ಬೆನಕೆ, ಅಭಯ್ ಪಾಟೀಲ, ಮಹಾಂತೇಶ ದೊಡಗೌಡ್ರ, ಮಹೇಶ್ ಕುಮಠಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್.ಮುಂಜಿ ಅವರು, ಬಸ್ ನಿಲ್ದಾಣದ ಕಾಮಗಾರಿ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಬಳಿಕ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು, ನೂತನ ಮಲ್ಟಿ ಎಕ್ಸೆಲ್ ಬಸ್ ನಲ್ಲಿ ಸುವರ್ಣ ವಿಧಾನಸೌಧಕ್ಕೆ ಪ್ರಯಾಣಿಸಿದರು.

ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಠ ಹಾಗೂ  ಶಾಸಕರು ಬಸ್ ನಲ್ಲಿ  ಜತೆಗೆ ತೆರಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next