Advertisement

ಹೆಬ್ಬಾಳಕರ ಸಹೋದರ ಚನ್ನರಾಜನೊಂದಿಗೆ ಬೆಂಗಳೂರಿಗೆ ತೆರಳಿದ Laxman Savadi

09:26 AM Apr 14, 2023 | Team Udayavani |

ಬೆಳಗಾವಿ: ಅಥಣಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ರಾಜೀನಾಮೆ ಸಲ್ಲಿಸಲು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇತರೆ ನಾಯಕರೊಂದಿಗೆ ಶುಕ್ರವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

Advertisement

ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಲಕ್ಷ್ಮಣ ಸವದಿ, ಬೆಂಗಳೂರಿಗೆ ತೆರಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹಳಿ ಸೇರಿದಂತೆ ಜಿಲ್ಲೆಯ ಇತರೆ ನಾಯಕರು ಲಕ್ಷ್ಮಣ ಸವದಿ ಅವರೊಂದಿಗೆ ಚರ್ಚಿಸಿದರು.

ಲಕ್ಷ್ಮಣ ಸವದಿ ಬಿಜೆಪಿಗೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರುತ್ತಾರಾ ಅಥವಾ ಪಕ್ಷೇತರರಾಗಿ ಚುನಾವಣಾ ಅಖಾಡಕ್ಕೆ ಇಳಿಯುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next