Advertisement

ಹೆಬ್ಬಾಳಕರ ಇಡಿ ನೋಟಿಸ್ ಬಗ್ಗೆ ನನಗೆ ತಿಳಿದಿಲ್ಲ : ಮಾಜಿ ಶಾಸಕ ಸಂಜಯ ಪಾಟೀಲ ಸ್ಪಷ್ಟನೆ

06:02 PM Sep 18, 2019 | Team Udayavani |

ಬೆಳಗಾವಿ : ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಇ.ಡಿ ಯಾವ ಕಾರಣಕ್ಕೆ ನೋಟಿಸ್ ಜಾರಿ ಮಾಡಿದೆ ಎಂಬುದು ತಮಗೆ ಗೊತ್ತಿಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದ್ದಾರೆ.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ಬೆಳಗಾವಿ  ಬೆಳಗಾವಿ ಗ್ರಾಮೀಣ ಶಾಸಕಿ ಹೆಬ್ಬಾಳಕರ ಅವರಿಗೆ ಇಡಿ ಇಲಾಖೆ ಯಾವ ಕಾರಣದಿಂದ ನೋಟಿಸ್ ಜಾರಿ ಮಾಡಿದೆ ಅನ್ನುವುದು ತನಗೆ ತಿಳಿದಿಲ್ಲ ಎಂದು ಹೇಳಿದರು. ಈ ವಿಷಯದಲ್ಲಿ ನನ್ನ ಯಾವುದೇ ಹಸ್ತಕ್ಷೇಪ ಇಲ್ಲ ಎಂದರು. ಇ ಡಿ ಹಾಗೂ ಐಟಿ ಇಲಾಖೆಗಳು ತಮ್ಮ ಕೆಲಸ ಮಾಡುತ್ತಿವೆ. ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಯಾವ ತಪ್ಪು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next