Advertisement

ರಮೇಶ್ ಜಾರಕಿಹೊಳಿ ಎರಡು ದೋಣಿಯಲ್ಲಿ ಕಾಲಿಟ್ಟಿರುವಂತಿದೆ : ಲಕ್ಷ್ಮಿ ಹೆಬ್ಬಾಳ್ಕರ್ ವ್ಯಂಗ್ಯ

07:02 PM Feb 15, 2021 | Team Udayavani |

ಬೆಳಗಾವಿ : ಸಿದ್ದರಾಮಯ್ಯ ಇಂದಿಗೂ ನಮ್ಮ ನಾಯಕರು. ದಿನಕ್ಕೆರಡು ಬಾರಿ ಅವರೊಂದಿಗೆ ಮಾತನಾಡುತ್ತೇನೆ ಎನ್ನುವ ಸಚಿವ ರಮೇಶ ಜಾರಕಿಹೊಳಿ ಇನ್ನೂ ಬಿಜೆಪಿಯಲ್ಲಿ ಸೆಟ್ಲ್ ಆದಂತೆ ಕಾಣುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರರಾಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ನೀಡಿದ್ದಾರೆ.

Advertisement

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ರಮೇಶ ಜಾರಕಿಹೊಳಿ ಎರಡೂ ದೋಣಿಯಲ್ಲಿ ಕಾಲಿಟ್ಟಿರುವಂತಿದೆ ಎಂದು ವ್ಯಂಗ್ಯವಾಡಿದರು. ರಮೇಶ ಜಾರಕಿಹೊಳಿ ಇನ್ನೂ ಕಾಂಗ್ರೆಸ್ ಜೊತೆ ಸಂಬಂಧವಿರಿಸಿಕೊಂಡಿದ್ದಾರೆಂದರೆ ಅವರಿಗೆ ಬಿಜೆಪಿಯಲ್ಲಿ ಹೊಂದಾಣಿಕೆಯಾಗುತ್ತಿಲ್ಲ ಎನಿಸುತ್ತಿದೆ. ಮತ್ತೆ ಕಾಂಗ್ರೆಸ್ ಗೆ ಮರಳಲು ಪ್ರಯತ್ನಿಸುತ್ತಿದ್ದಾರೋ ಅಥವಾ ಕಾಂಗ್ರೆಸ್ ಸಂಪರ್ಕದಲ್ಲಿದ್ದೇನೆ ಎನ್ನುವ ಮೂಲಕ ಬಿಜೆಪಿ ಸರಕಾರಕ್ಕೆ ಎಚ್ಚರಿಕೆಯನ್ನು ನಿಡುತ್ತಿದ್ದಾರೋ ಎಂದು ಹೆಬ್ಬಾಳ್ಕರ್ ಚಾಟಿ ಬೀಸಿದರು.

ಇದನ್ನೂ ಓದಿ:#DishaRavi ಬಂಧನ ಪ್ರಜೆಗಳ ಮೇಲಿನ ದೌರ್ಜನ್ಯ ಮಾತ್ರವಲ್ಲ… : ಸಿದ್ದರಾಮಯ್ಯ ಟ್ವೀಟಾಕ್ರೋಶ

ಬೆಳಗಾವಿ ಗ್ರಾಮೀಣ ಕ್ಷೇತ್ರದ 22 ಗ್ರಾಮ ಪಂಚಾಯಿತಿ ಸದಸ್ಯರು ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ರಮೇಶ ಜಾರಕಿಹೊಳಿ ಸುಳ್ಳು ಹೇಳಿದ್ದಾರೆ. ಅರ್ಧದಷ್ಟು ಗ್ರಾಮ ಪಂಚಾಯಿತಿ ಸದಸ್ಯರು ಕೂಡ ಅವರ ಕಾರ್ಯಕ್ರಮಕ್ಕೆ ಹೋಗಿಲ್ಲ. ಹಾಕಿದ್ದ ಖುರ್ಚಿಗಳೆಲ್ಲ ಖಾಲಿ ಇದ್ದಿದ್ದೇ ಇದಕ್ಕೆ ಸಾಕ್ಷಿ. ಕೆಲವರು ಸಚಿವರ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವಂತಿದೆ.

ಸದಸ್ಯರಲ್ಲದವರನ್ನೂ ತಂದು ಕೂಡಿಸಿ ಸನ್ಮಾನ ಮಾಡಲಾಗಿದೆ. ಅದಕ್ಕೆ ಫೋಟೋನೇ ಸಾಕ್ಷಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

Advertisement

ರಮೇಶ ಜಾರಕಿಹೊಳಿ ಒಬ್ಬ ಸಚಿವರಾಗಿ ಜವಾಬ್ದಾರಿಯುತವಾಗಿತಮ್ಮ ಖುರ್ಚಿಗೆ ಗೌರವ ಕೊಟ್ಟಾದರೂ ಮಾತನಾಡಬೇಕು. ನಾಲಗೆಯ ಮೇಲೆ ಅವರಿಗೆ ಹಿಡಿತವಿಲ್ಲ. ನನ್ನನ್ನು ಶಾಸಕಿಯನ್ನಾಗಿ ಮಾಡಿದ್ದು ಕ್ಷೇತ್ರದ ಜನರೇ ಹೊರತು ಅವರಲ್ಲ. ಬದಲಾಗಿ ಅವರು ಬೆನ್ನಿಗೆ ಚೂರಿ ಹಾಕುವ ಕೆಲಸ ಬಿಟ್ಟು ಬೇರೇನೂ ಮಾಡಿಲ್ಲ. 2023ರ ಚುನಾವಣೆಯಲ್ಲಿ ಅಭಿವೃದ್ಧಿಗೆ ಮತ ನೀಡುವ ಮೂಲಕ ಜನರು ಇವರಿಗೆ ಬುದ್ದಿ ಕಲಿಸಲಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next