ಬೆಂಗಳೂರು: ವಿರೋಧ ಪಕ್ಷಗಳ ನಾಯಕರ ಮನೆ ಮೇಲೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ನಡೆಸುವುದು ಇತ್ತಿಚೀನ ದಿನಗಳಲ್ಲಿ ಸರ್ವೆ ಸಾಮಾನ್ಯ ಆಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿರೋಧ ಪಕ್ಷಗಳ ಮೇಲೆ ಸಿಬಿಐ, ಇಡಿ, ಐಟಿ ದಾಳಿ ಮಾಡುತ್ತಿರುವುದು ದೇಶದಲ್ಲಿ, ರಾಜ್ಯದಲ್ಲಿ ಜಗತ್ತ್ ಜಾಹೀರಾಗಿದೆ. ಅದರಲ್ಲಿ ಹೊಸದೇನು ಇಲ್ಲ. ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದರು.
ಇದನ್ನೂ ಓದಿ:1,20,000 ರೂ. ಮ್ಯಾಕ್ಬುಕ್ ಪ್ರೊ ಆರ್ಡರ್ ಮಾಡಿದಾತನಿಗೆ ಬಂದದ್ದು ನಾಯಿಗೆ ಹಾಕುವ ಪೆಡಿಗ್ರಿ.!
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಡುತ್ತೇವೆ ಎಂದು ಮುಖ್ಯಮಂತ್ರಿಗಳು ಎಂದು ನಾಲ್ಕು ಸಲ ಹೇಳಿದ್ದಾರೆ. ಈಗ ಸಮಿತಿ ರಚಿಸಿ ವರದಿ ಬಂದ ಬಳಿಕ ಮೀಸಲಾತಿ ಕೊಡುತ್ತೀವಿ ಅಂತ ಹೇಳುತ್ತಿದ್ದಾರೆ. ಹಾಗಾದರೆ ಅವರಿಗೆ ಮೀಸಲಾತಿ ಕೊಡಲು ಇಷ್ಟ ಇಲ್ವಾ? ಯಾರದಾದರೂ ಒತ್ತಡ ಇದೆಯೇ ಎನ್ನುವುದು ಗೊತ್ತಿಲ್ಲ ಎಂದು ಹೇಳಿದರು.
ಯತ್ನಾಳ್ ಅವರು ಸಿಎಂ ಭರವಸೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ. 22 ರವರೆಗೂ ಸರ್ಕಾರಕ್ಕೆ ಗಡುವು ಕೊಟ್ಟಿದ್ದೇವೆ. ಆದಾದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.