Advertisement

Udupi Video case: ಸಿಐಡಿಯಿಂದ ನಿಷ್ಪಕ್ಷಪಾತ ತನಿಖೆ: ಲಕ್ಷ್ಮೀ ಹೆಬ್ಬಾಳಕರ್

09:09 AM Aug 08, 2023 | Team Udayavani |

ಉಡುಪಿ: ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು ಈ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿರುವುದು ಸೂಕ್ತವಾಗಿದೆ ಜೊತೆಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿದ ಅವರು ವಿಡಿಯೋ ಮಾಡಲಾಗಿದೆ ಎನ್ನಲಾದ ಪ್ರಕರಣ ಅತ್ಯಂತ ಸೂಕ್ಷ್ಮವಾದದ್ದು, ಹೆಣ್ಣುಮಕ್ಕಳಿಗೆ ಸಂಬಂಧಿಸಿದ ಮತ್ತು ವಿದ್ಯಾರ್ಥಿಗಳ ಭವಿಷ್ಯದ ವಿಷಯವಾಗಿರುವುದರಿಂದ ಸರಕಾರ ಮೊದಲಿಂದಲೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆ ಇನ್ನಷ್ಟು ಆಳವಾಗಿ ಮತ್ತು ಸ್ವತಂತ್ರವಾಗಿ ನಡೆಯಲಿ ಎನ್ನುವ ಕಾರಣಕ್ಕೆ ಸಿಐಡಿಗೆ ಒಪ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vaibhav Taneja: ಟೆಸ್ಲಾ ಕಂಪೆನಿಯ ನೂತನ ಸಿಇಒ ಆಗಿ ಭಾರತೀಯ ಮೂಲದ ವೈಭವ್ ತನೇಜಾ ನೇಮಕ

 

Advertisement

Udayavani is now on Telegram. Click here to join our channel and stay updated with the latest news.

Next