Advertisement

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

07:20 PM Jun 27, 2024 | Team Udayavani |

ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ.

Advertisement

ಬೆಳಗಾವಿ ಜಿಲ್ಲೆಯ ಯರಗಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಾಗಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಕಳಪೆ ಆಹಾರಗಳ ಪೂರೈಕೆಯನ್ನು ಯಾವುದೇ ಕಾರಣದಿಂದ ಸಹಿಸಲು ಸಾಧ್ಯವಿಲ್ಲ.ಸ್ಥಳೀಯ ಮಟ್ಟದಲ್ಲಿ ತಪ್ಪುಗಳಾದರೆ ಅದು ಮೇಲ್ಮಟ್ಟದವರೆಗೆ ಎಲ್ಲರಿಗೂ ಕೆಟ್ಟ ಹೆಸರು ತರುತ್ತದೆ. ಮಕ್ಕಳ ಹಾಗೂ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಈ ವಿಷಯದಲ್ಲಿ ತಪ್ಪಾದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅಂಗನವಾಡಿ ಸೇರಿದಂತೆ ಇಲಾಖೆಗೆ ಸಂಬಂಧಿಸಿದ ಎಲ್ಲ ವಿಭಾಗಗಳನ್ನು ಸಂಪೂರ್ಣ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಈಗಾಗಲೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಎಂಎಸ್ ಪಿಸಿ ಘಟಕಗಳ ಸುಧಾರಣೆಗೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next