Advertisement

ಶಾಲಾ ಕಟ್ಟಡ ಕಳಪೆಯಾದರೆ ಕಠಿಣ ಕ್ರಮ: ಹೆಬ್ಟಾಳಕರ್

03:26 PM Oct 27, 2020 | sudhir |

ಬೆಳಗಾವಿ: ಶಾಲೆಗಳು ಮಕ್ಕಳ ಭವಿಷ್ಯ ರೂಪಿಸುವ ತಾಣ. ಅಲ್ಲಿ ನಿರಾತಂಕವಾಗಿ ಮತ್ತು ನಿಷ್ಠೆ, ಭಕ್ತಿಯಿಂದ ಮಕ್ಕಳು
ಕಲಿಯುವಂತಹ ವಾತಾವರಣವಿರಬೇಕು. ಶಾಲಾ ಕಟ್ಟಡಗಳು ಅತ್ಯಂತ ಸುಸಜ್ಜಿತವಾಗಿ ನಿರ್ಮಾಣವಾಗಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಎಚ್ಚರಿಕೆ ನೀಡಿದರು.

Advertisement

ಬೆಳಗಾವಿ ಗ್ರಾಮೀಣ ಕ್ಷೇತ್ರದ ವಾಘವಾಡೆ ಗ್ರಾಮದ ಸರ್ಕಾರಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಎರಡು ನೂತನ ಕೊಠಡಿಗಳನ್ನು ಉದ್ಘಾಟನೆ ಹಾಗೂ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ಒಂದು ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು. ಕ್ಷೇತ್ರದಲ್ಲಿ ನೂರಾರು ಶಾಲೆಗಳಿಗೆ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸುವ ಕಾರ್ಯವನ್ನು ನಾನು ಕಳೆದ 2 ವರ್ಷದಲ್ಲಿ ಕೈಗೆತ್ತಿಕೊಂಡಿದ್ದೇನೆ. ಎಲ್ಲಿಯೂ ಕಟ್ಟಡ ಮತ್ತು ಕೊಠಡಿಯ ಕೊರತೆಯಾಗಬಾರದು ಎಂದರು. ಯಾವುದೇ ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು. ಈ ದಿಸೆಯಲ್ಲಿ
ಗ್ರಾಮಸ್ಥರು ಎಲ್ಲ ರೀತಿಯ ಕ್ರಮ ತೆಗೆದುಕೊಳ್ಳಬೇಕು.

ನಿಮ್ಮೊಂದಿಗೆ ನಾನಿರುತ್ತೇನೆ ಎಂದು ಹೆಬ್ಟಾಳಕರ ಅಭಯ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜುಟ್ಟನವರ, ಇಂಜಿನಿಯರ್‌ ಜಾಧವ್‌, ಯುವರಾಜ ಕದಂ, ಸ್ಥಳೀಯ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next