Advertisement

ನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜ್ ಕುಮಾರ್ ಪ್ರಶಸ್ತಿ ಪ್ರದಾನ

09:31 PM Apr 24, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಡಾ. ರಾಜ್ ಕುಮಾರ್ ಅವರ ಜನ್ಮ ದಿನಾಚರಣೆ ಹಾಗೂ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿದರು.

Advertisement

ಚಿತ್ರನಟಿ ಲಕ್ಷ್ಮೀ ಅವರಿಗೆ ಜೀವಮಾನ ಸಾಧನೆಗೆ ಡಾ. ರಾಜ್ ಕುಮಾರ ಪ್ರಶಸ್ತಿ ಪ್ರದಾನ ಮಾಡಿದರು. ಖ್ಯಾತ ನಿರ್ದೇಶಕ ಎಸ್ ನಾರಾಯಣ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಪ್ರದಾನ ಮಾಡಿದರು. ವಿಷ್ಣುವರ್ಧನ ಪ್ರಶಸ್ತಿ ದಿ. ಜಿ ಎಂ ಲಕ್ಷ್ಮೀಪತಿ ಅವರ ಪರವಾಗಿ ಅವರ ಪುತ್ರ ರಾಮ್ ಪ್ರಸಾದ ಅವರು ಸ್ವೀಕರಿಸಿದರು.

ಚಿತ್ರ ನಗರಿ ಕಾಮಗಾರಿ ಪ್ರಾರಂಭ

ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಸಿಎಂ, ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದರು.

Advertisement

ಯಾರೂ ಮನವಿ ಮತ್ತು ಬೇಡಿಕೆ ಸಲ್ಲಿಸದಿದ್ದರೂ 2022-23 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200 ಚಲನಚಿತ್ರಗಳಿಗೆ ಸಹಾಯಧನ ನೀಡಲು ಅವಕಾಶ ಕಲ್ಪಿಸಿದ್ದೇವೆ ಎಂದು ತಿಳಿಸಿದರು.

2017 ನೇ ಸಾಲಿನ ಕನ್ನಡ ಚಲನಚಿತ್ರ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ ಕುಮಾರ್  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಮ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನಿಲ್ ಪುರಾಣಿಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಆಯುಕ್ತ ಡಾ. ಪಿ ಎಸ್ ಹರ್ಷ, ಚಿನ್ನೇಗೌಡ ಮತ್ತು ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next