Advertisement
1904, ಅಕ್ಟೋಬರ್ 2ಇದು ಲಾಲ್ ಬಹದ್ದೂರ್ ಶಾಸ್ತ್ರಿಯವರು ಜನ್ಮತಾಳಿದ ವರ್ಷ. ಉತ್ತರ ಪ್ರದೇಶದ ಮುಘಲ್‌ಸರಾಯಿಯಲ್ಲಿ ಹುಟ್ಟಿದ ಇವರು, 1920ರಲ್ಲೇ ಸ್ವಾತಂತ್ರ್ಯ ಚಳವಳಿಗೆ ಧುಮುಕಿದರು. ಆರಂಭ ದಿಂದಲೂ ಮಹಾತ್ಮಾ ಗಾಂಧೀಜಿಯವರ ಕಟ್ಟಾ ಅನುಯಾಯಿ ಯಾಗಿದ್ದವರು. 1964ರಲ್ಲಿ ನೆಹರೂ ಅವರ ಮರಣಾನಂತರ, ಪ್ರಧಾನಿ ಹುದ್ದೆಗೆ ಏರಿ, ಜೈ ಜವಾನ್ ಮತ್ತು ಜೈಕಿಸಾನ್ ಎಂಬ ಉದ್ಘೋ ಷದ ಮೂಲಕ ದೇಶಾದ್ಯಂತ ಹೊಸದೊಂದು ಆಂದೋಲನವನ್ನೇ ಸೃಷ್ಟಿಸಿದರು.
– 1930ರಲ್ಲಿ ಶಾಸ್ತ್ರಿಯವರು ಉಪ್ಪಿನ ಸತ್ಯಾಗ್ರಹದಲ್ಲಿ ಭಾಗಿಯಾಗಿದ್ದರು. ಇದರಿಂದಾಗಿ ಇವರು ಎರಡು ವರ್ಷಗಳ ಕಾಲ ಜೈಲುವಾಸ ಅನುಭವಿಸಬೇಕಾಯಿತು.
– 1942ರ ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಮಹಾತ್ಮಾ ಗಾಂಧೀಜಿಯವರ ಜತೆಗೆ ಸೇರಿ ಭಾಗಿಯಾದರು.
– 1965ರಲ್ಲಿ ಪಾಕಿಸ್ಥಾನ ವಿರುದ್ಧ ನಡೆದ ಕದನದಲ್ಲಿ ಭಾರತ ಅಪ್ರತಿಮ ಗೆಲುವು ಕಾಣಲು ಕಾರಣರಾದರು.
– ಯುದ್ಧಾನಂತರ ಭಾರತ ಆಹಾರದ ಅಭಾವದಿಂದ ಭಾರೀ ಕಷ್ಟಕ್ಕೀಡಾಗಿತ್ತು. ಆಗ ಪ್ರಧಾನಿಯಾಗಿದ್ದ ಇವರು, ವೇತನವನ್ನು ಪಡೆಯದೇ ಇದನ್ನು ಆಹಾರವಿಲ್ಲದವರಿಗೆ ನೀಡುವ ಕೆಲಸ ಮಾಡಿದರು. ವೇತನ ಬಿಡುವ ಪದ್ಧತಿ ಆರಂಭಿಸಿದವರು ಇವರೇ.
-ಶ್ವೇತಕ್ರಾಂತಿಯ ಜನಕರೂ ಇವರೇ. 1965ರಲ್ಲಿ ಹೆಚ್ಚಿನ ಹಾಲು ಉತ್ಪಾದನೆಗಾಗಿ ಇದನ್ನು ಆರಂಭಿಸಲಾಯಿತು. ಅಲ್ಲದೆ, ಹಾಲು ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಬೇಕು, ಈ ಮೂಲಕ ಆತ್ಮನಿರ್ಭರತೆ ಸಾಧಿಸಬೇಕು ಎಂಬುದು ಅವರ ಆಶಯವಾಗಿತ್ತು. ಕಾರುಕೊಳ್ಳಲೂ ಪ್ರಧಾನಿಯ ಬಳಿ ಹಣವಿರಲಿಲ್ಲ!
ನೆಹರೂ ಸಂಪುಟದಲ್ಲಿ ಒಮ್ಮೆ ರೈಲ್ವೇ ಹಾಗೂ ಇನ್ನೊಮ್ಮೆ ಗೃಹ ಖಾತೆಯ ಸಚಿವರಾಗಿದ್ದ ಶಾಸ್ತ್ರೀಜಿ, ಮುಂದೆ ಪ್ರಧಾನಿಗಳೂ ಆದರು. ಈ ಸಂದರ್ಭದಲ್ಲಿ ನಡೆದ ಪ್ರಸಂಗವಿದು. ಆಗ ಉಳಿದೆಲ್ಲ ರಾಜಕಾರಣಿಗಳ ಬಳಿಯೂ ಎರಡು ಮೂರು ಕಾರುಗಳಿದ್ದವು. ಆದರೆ ಗೃಹ ಸಚಿವ ಅನ್ನಿಸಿಕೊಂಡ ಅನಂತರ ಕೂಡ ಶಾಸ್ತ್ರಿಯವರು ಸ್ವಂತದ ಕಾರು ಖರೀದಿಸಲಿಲ್ಲ. ಆಗ ಕೂಡ ಮಕ್ಕಳನ್ನು ಮಧ್ಯಮ ವರ್ಗದ ಮಕ್ಕಳು ಹೋಗುತ್ತಿದ್ದ ಕುದುರೆ ಬಂಡಿಯಲ್ಲೇ ಶಾಲೆಗೆ ಕಳಿಸುತ್ತಿದ್ದರು.
Related Articles
Advertisement
ಅದಕ್ಕೆ ಒಪ್ಪಿದ ಶಾಸ್ತ್ರೀಜಿ, ಅವತ್ತೇ ಸಂಜೆ ತಮ್ಮ ಆಪ್ತ ಕಾರ್ಯದರ್ಶಿಯನ್ನು ಕರೆದು ತಮ್ಮ ಬ್ಯಾಂಕ್ ಬ್ಯಾಲೆನ್ಸ್ ಎಷ್ಟಿದೆ ಹಾಗೂ ಒಂದು ಹೊಸ ಕಾರಿನ ಬೆಲೆ ಎಷ್ಟಾಗುತ್ತದೆ ಎಂದು ವಿಚಾರಿಸಿ ತಿಳಿಸುವಂತೆ ಆದೇಶಿಸಿದರು.
ಮರುದಿನ ಬೆಳಗ್ಗೆ ಸಂಕೋಚದಿಂದಲೇ ಅವರ ಮುಂದೆ ನಿಂತ ಆಪ್ತಕಾರ್ಯದರ್ಶಿ “ಸರ್, ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ನಾಲ್ಕು ಸಾವಿರ ರೂ.ಗಳಿದೆ ಹಾಗೂ ಹೊಸ ಕಾರಿನ ಬೆಲೆ ಹನ್ನೆರಡು ಸಾವಿರ ರೂ. ಆಗುತ್ತದೆ’ ಎಂದರು!
ಭಾರತದಂಥ ಬೃಹತ್ ದೇಶದ ಪ್ರಧಾನಿಯಾಗಿದ್ದ ಸಮಯದಲ್ಲಿ ಕೂಡ ಅವರ ಬಳಿ ಆಪತ್ಕಾಲದ ನಿಧಿ ಎಂಬಂತೆ ಇದ್ದುದು ಕೇವಲ ನಾಲ್ಕು ಸಾವಿರ ರೂ. ಎಂದು ತಿಳಿದು ಶಾಸ್ತ್ರಿಯವರ ಮಕ್ಕಳಿಗೆಲ್ಲ ಶಾಕ್ ಆಯಿತು. ಆದರೆ ಶಾಸ್ತ್ರೀಜಿ ಅದೇನೂ ದೊಡ್ಡ ಸಂಗತಿಯಲ್ಲ ಎಂಬಂತೆ ತಮ್ಮ ಬ್ಯಾಂಕ್ ಬ್ಯಾಲೆನ್ಸ್‌ನ ವಿವರ ಪಡೆದ ಅನಂತರವೂ ಹಸನ್ಮುಖಿಯಾಗಿಯೇ ಇದ್ದರು. ನಂತರ ಸರಕಾರದಿಂದ ಸಾಲ ಪಡೆದು ಹೊಸ ಕಾರು ಖರೀದಿಸಿ, ಮಕ್ಕಳ ಬಯಕೆಯನ್ನು ಪೂರೈಸಿದರು.