ಕಾಪು : ಕಾಪು ವಿಧಾನ ಸಭಾ ವ್ಯಾಪ್ತಿಯ ಕೈಪುಂಜಾಲು, ಪೊಲಿಪುವಿನ ಕಡಲ್ಕೊರೆತ ಮತ್ತು ಕಾಮಗಾರಿ ವಿಳಂಭದ ಬಗ್ಗೆ ಆರೋಪಗಳು ಕೇಳಿ ಬಂದಿದ್ದ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಸೋಮವಾರ ಬೆಳಗ್ಗೆ ಭೇಟಿ ನೀಡಿದರು.
ಮೀನುಗಾರಿಕಾ ಮತ್ತು ಬಂದರು ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ವೀಕ್ಷಣೆ ನಡೆಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ ಅವರು ಅಗತ್ಯ ಇರುವಲ್ಲಿ ತುರ್ತಾಗಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ನಡೆಸುವಂತೆ ಮತ್ತು ಪೊಲಿಪುವಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯ ಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಕಾಪು ಪುರಸಭಾ ಸದಸ್ಯ ಕಿರಣ್ ಆಳ್ವ, ಕಾಪು ಕ್ಷೇತ್ರ ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸ್ಥಳೀಯ ಪ್ರಮುಖರಾದ ಪ್ರವೀಣ್ ಕುಂದರ್ ಪೊಲಿಪು, ಜಗದೀಶ್ ಬಂಗೇರ, ನರೇಶ್ ಮೆಂಡನ್, ಅನಂತ್ ಕುಂದರ್, ಧನಂಜಯ ಸುವರ್ಣ, ಜಗದೀಶ್ ಕಾಂಚನ್, ಗಿರೀಶ್ ಕಾಂಚನ್, ನವೀನ್ ಅಮೀನ್, ಯೋಗೀಶ್ ಅಮೀನ್, ಪುರಷೋತ್ತಮ ಪುತ್ರನ್, ಗುತ್ತಿಗೆದಾರರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ವಾಯುವ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ ನಾಮಪತ್ರ ಸಲ್ಲಿಕೆ