Advertisement

ಸೋನಿಯಾ ಭೇಟಿಯಾದ ಲಾಲು-ನಿತೀಶ್: ಎಲ್ಲರೂ ಒಗ್ಗೂಡಲು ಒತ್ತಾಯ

07:56 PM Sep 25, 2022 | Team Udayavani |

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಭೇಟಿಯಾಗಿ 2024 ರಲ್ಲಿ ಬಿಜೆಪಿಯನ್ನು ಸೋಲಿಸಲು ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಒತ್ತಾಯಿಸಿದರು.

Advertisement

ಇದನ್ನೂ ಓದಿ: ಕಲಬುರಗಿ: ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಮಂತ ಇಲ್ಲಾಳ ನಾಳೆ ಏರ್ ಲಿಫ್ಟ್

ಕಾಂಗ್ರೆಸ್ ಮತ್ತು ಸಾಂಪ್ರದಾಯಿಕವಾಗಿ ಭಿನ್ನಾಭಿಪ್ರಾಯ ಹೊಂದಿರುವ ಕೆಲವು ಪ್ರಾದೇಶಿಕ ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಸಮನ್ವಯಗೊಳಿಸುವ ಪ್ರಯತ್ನಗಳು ನಡೆಯುತ್ತಿರುವುದರಿಂದ ಗಾಂಧಿಯವರ 10 ಜನಪಥ್ ನಿವಾಸದಲ್ಲಿ ನಡೆದ ಸಭೆಯು ವಿರೋಧ ಪಕ್ಷಗಳ ಏಕತೆಯನ್ನು ರೂಪಿಸುವಲ್ಲಿ ಬಹಳ ನಿರ್ಣಾಯಕವೆಂದು ಪರಿಗಣಿಸಲಾಗಿದೆ.

ಆಗಸ್ಟ್‌ನಲ್ಲಿ ಬಿಹಾರದಲ್ಲಿ ಸರಕಾರ ರಚಿಸಲು ಬಿಜೆಪಿಯೊಂದಿಗಿನ ಮೈತ್ರಿ ಕಡಿದುಕೊಂಡು ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿದ ನಂತರ ನಿತೀಶ್ ಅವರು ಸೋನಿಯಾ ಅವರನ್ನು ಮೊದಲ ಬಾರಿಗೆ ಭೇಟಿಯಾದರು. ಇದು ಲಾಲು ಪ್ರಸಾದ್ ಅವರ ಸುದೀರ್ಘ ಕಾಲದ ಮೊದಲ ಸಕ್ರಿಯ ರಾಜಕೀಯ ಭಾಗವಹಿಸುವಿಕೆಯೂ ಆಗಿತ್ತು. ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಲಾಲು ಪ್ರಸಾದ್, ‘ಬಿಜೆಪಿಯನ್ನು ಸೋಲಿಸಲು ನಾವು ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಬೇಕು. ಕಾಂಗ್ರೆಸ್ ತನ್ನ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿದೆ ಮತ್ತು ಚುನಾವಣೆಯ ನಂತರ ನಾವು ಮತ್ತೆ ಭೇಟಿಯಾಗುತ್ತೇವೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

Advertisement

”ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲಾ ವಿರೋಧ ಪಕ್ಷಗಳು ಕೈಜೋಡಿಸಿ ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ. ಬಿಜೆಪಿ ವಿರುದ್ಧದ ಹೋರಾಟದಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಂದೇ ಪುಟದಲ್ಲಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯ ನಂತರ ಕ್ರಿಯಾ ಯೋಜನೆ ಬಗ್ಗೆ ಚರ್ಚೆ ನಡೆಯಲಿದೆ” ಎಂದು ನಿತೀಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಅಕ್ಟೋಬರ್ 17ಕ್ಕೆ ಮತದಾನ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next