Advertisement

ನಾಲ್ಕನೇ ಕೇಸಲ್ಲೂ ಲಾಲು ದೋಷಿ

06:00 AM Mar 20, 2018 | |

ರಾಂಚಿ: ಮೇವು ಹಗರಣದ ಮತ್ತೂಂದು ಪ್ರಕರಣದಲ್ಲಿ ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಆರೋಪ ಸಾಬೀತಾಗಿದೆ. ಸಿಬಿಐ ನ್ಯಾಯಾಧೀಶ ಶಿವಪಾಲ್‌ ಸಿಂಗ್‌ ಸೋಮವಾರ ಈ ಸಂಬಂಧ ತೀರ್ಪು ಪ್ರಕಟಿಸಿದ್ದು, ಇನ್ನೊಬ್ಬ ಪ್ರಮುಖ ಆರೋಪಿ ಮಾಜಿ ಸಿಎಂ ಜಗನ್ನಾಥ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಲಾಗಿದೆ. ಧುಮ್ಕಾ ಖಜಾನೆಯಿಂದ 1990ರಲ್ಲಿ 3.13 ಕೋಟಿ ರೂ. ಅಕ್ರಮವಾಗಿ ವರ್ಗಾಯಿಸಿದ ಪ್ರಕರಣ ಇದಾಗಿದೆ. ಮಾರ್ಚ್‌ 21ರಂದು ಶಿಕ್ಷೆ ಅವಧಿಯನ್ನು ಪ್ರಕಟಿಸಲಾಗುತ್ತದೆ.

Advertisement

ತೀರ್ಪಿನ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಲಾಲು ಹೇಳಿದ್ದಾರೆ. ಆದರೆ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುತ್ತದೆ ಎಂದು ಪಕ್ಷದ ಉಪಾಧ್ಯಕ್ಷ ರಘುವಂಶ ಪ್ರಸಾದ್‌ ಸಿಂಗ್‌ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next