Advertisement

ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಗೆ ಐಸಿಯುನಲ್ಲಿ ಚಿಕಿತ್ಸೆ

08:46 PM Jul 04, 2022 | Team Udayavani |

ಪಾಟ್ನಾ: ಬಿಹಾರದ ಮಾಜಿ ಸಿಎಂ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಅವರನ್ನು ಮಂಗಳವಾರ ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಐಸಿಯು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

ಭಾನುವಾರ ಮೆಟ್ಟಿಲಿನಿಂದ ಕೆಳಗೆ ಬಿದ್ದು, ಬಲ ಭುಜ ಮುರಿದುಕೊಂಡಿದ್ದ ಅವರು, ಕಿಡ್ನಿ ಸಮಸ್ಯೆ, ಭುಜ ನೋವು ಸೇರಿ ಅನೇಕ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.

ಲಾಲು ಅವರ ಜತೆ ಪತ್ನಿ ರಾಬ್ರಿ ದೇವಿ, ಮಕ್ಕಳಾಗಿರುವ ತೇಜ್‌ ಪ್ರತಾಪ್‌ ಯಾದವ್‌ ಮತ್ತು ತೇಜಸ್ವಿ ಯಾದವ್‌ ಇದ್ದಾರೆ.

ಮೇವು ಹಗರಣ ಪ್ರಕರಣದ ಆರೋಪಿಯಾಗಿರುವ ಲಾಲು ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಅವರು, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವುದರಿಂದಾಗಿ ಚಿಕಿತ್ಸೆಗೆ ಸಿಂಗಾಪುರಕ್ಕೆ ತೆರಳು ಕಳೆದ ತಿಂಗಳು ಜಾರ್ಖಂಡ್‌ ನ್ಯಾಯಾಲಯ ಅನುಮತಿ ಕೊಟ್ಟಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next