ರಾಂಚಿ: ಬಿಹಾರದ ಮಾಜಿ ಸಿಎಂ, ಆರ್‌ಜೆಡಿ ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯ ಹದಗೆಟ್ಟಿದೆ.
ಹೀಗಾಗಿ, ಅವರನ್ನು ನವದೆಹಲಿಯಲ್ಲಿರುವ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆ ಉಂಟಾಗಿದೆ. ಹೀಗಾಗಿ, ಉತ್ತಮ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್‌ಗೆ ಕಳುಹಿಸಲಾಗಿದೆ.
ಇದನ್ನೂ ಓದಿ:ಜೇಮ್ಸ್ ತೆಗೆದು ಕಾಶ್ಮೀರ್ ಫೈಲ್ಸ್ ಪ್ರದರ್ಶಿಸುವಂತೆ ರಾಜಕೀಯ ಮುಖಂಡರಿಂದ ಒತ್ತಡ: ನಿರ್ಮಾಪಕ
ಮೇವು ಹಗರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಅವರು, ರಾಂಚಿಯಲ್ಲಿರುವ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ಸಮಿತಿ ಈ ಬಗ್ಗೆ ಶಿಫಾರಸು ಮಾಡಿದೆ.