ರಾಂಚಿ: ಜಾರ್ಖಂಡ್ ನ ಪಲಾಮು ವಿಶೇಷ ಕೋರ್ಟ್ ಬುಧವಾರ (ಜೂನ್ 08) 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲುಪ್ರಸಾದ್ ಯಾದವ್ ಗೆ 6,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಇದನ್ನೂ ಓದಿ:ಹೊಸಪೇಟೆ: ಭಾರೀ ಗಾಳಿಗೆ ನೆಲಕ್ಕುರುಳಿದ ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಬ್ಲ್ಯಾಸ್ಟ್
2009ರಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಪ್ರಕರಣದಲ್ಲಿ ಜಾರ್ಖಂಡ್ ನ ಕೋರ್ಟ್ ಗೆ ಹಾಜರಾಗಲು ಲಾಲು ಪ್ರಸಾದ್ ಯಾದವ್ ಅವರು ಮಂಗಳವಾರವೇ ರಾಂಚಿಗೆ ಆಗಮಿಸಿದ್ದರು ಎಂದು ಎಎನ್ ಐ ವರದಿ ತಿಳಿಸಿದೆ.
ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, 6,000 ರೂಪಾಯಿ ದಂಡ ವಿಧಿಸಿ, ಅರ್ಜಿ ಇತ್ಯರ್ಥಗೊಂಡಿದ್ದು, ಇನ್ಮುಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗಬೇಕಾದ ಅಗತ್ಯವಿಲ್ಲ ಎಂದು ಯಾದವ್ ಪರ ವಕೀಲರಾದ ಧೀರೇಂದ್ರ ಕುಮಾರ್ ಸಿಂಗ್ ತಿಳಿಸಿರುವುದಾಗಿ ಎಎನ್ ಐ ವರದಿ ಮಾಡಿದೆ.
ಪ್ರಕರಣದಲ್ಲಿ ತೀರ್ಪು ಹೊರಬಿದ್ದ ನಂತರ ಲಾಲು ಪ್ರಸಾದ್ ಅವರು ಪಲಾಮುವಿನಿಂದ ಪಾಟ್ನಾಕ್ಕೆ ತೆರಳಿರುವುದಾಗಿ ವರದಿ ತಿಳಿಸಿದೆ. ಕಳೆದ ತಿಂಗಳು ಸಿಬಿಐ “ರೈಲ್ವೆ ಉದ್ಯೋಗಕ್ಕಾಗಿ ಭೂಮಿ” ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್, ಪತ್ನಿ ಹಾಗೂ ಪುತ್ರಿ, ಇತರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು. ಯಾದವ್ 2004ರಿಂದ 2009ರವರೆಗೆ ರೈಲ್ವೆ ಖಾತೆ ಸಚಿವರಾಗಿದ್ದಾಗ ಈ ಭ್ರಷ್ಟಾಚಾರ ನಡೆದಿರುವುದಾಗಿ ವರದಿ ತಿಳಿಸಿದೆ.