ಭಾಲ್ಕಿ: ಲಂಬಾಣಿ ಸಮುದಾಯದ ಜನ ಸ್ವಾವಲಂಬಿ, ಕಾಯಕ ಜೀವಿಗಳಾಗಿ ಎಲ್ಲ ಸಮುದಾಯದ ಜನರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದಾರೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು. ಪಟ್ಟಣದ ಸರ್ಕಾರಿ ಕಲ್ಯಾಣ ಮಂಟಪದಲ್ಲಿ ಸಂಸ್ಕೃತಿ ಮಂತ್ರಾಲಯ ನವದೆಹಲಿ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಘಟಕದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಬುಡಕಟ್ಟು ಲಂಬಾಣಿ ಜನಪದ ಉತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರ ವ್ಯಾಪ್ತಿಯ ಎಲ್ಲ ತಾಂಡಾ ಅಭಿವೃದ್ಧಿಪಡಿಸಲಾಗಿದೆ. ಸರ್ಕಾರದ ಯೋಜನೆ ಬಂಜಾರ ಜನರ ಮನೆ ಬಾಗಿಲಿಗೆ ಮುಟ್ಟಿಸಲಾಗಿದೆ. ಬರುವ ದಿನಗಳಲ್ಲಿ ಶೈಕ್ಷಣಿಕ, ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿ ಸಲು ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಮಾಜಿ ಶಾಸಕ ಪ್ರಕಾಶ ಖಂಡ್ರೆ ಮಾತನಾಡಿ, ನಾನು ಶಾಸಕನಿದ್ದ ಅವಧಿಯಲ್ಲಿ ಬಂಜಾರಾ ಸಮುದಾಯದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿದ್ದೇನೆ. ವಿವಿಧ ಅಭಿವೃದ್ಧಿ ಕೆಲಸ ಕೈಗೊಂಡು ಮಾದರಿ ತಾಂಡಾಗಳನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದರು. ಜಾನಪದ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ಅಶೋಕ ಮೈನಾಳೆ ಪ್ರಾಸ್ತಾವಿಕ ಮಾತನಾಡಿದರು. ಡಾ| ರಾಜಶೇಖರ ಶಿವಾಚಾರ್ಯ ಸಮ್ಮುಖ ವಹಿಸಿದರು. ಗೋವಿಂದ ಮಹಾರಾಜ ನೇತೃತ್ವ ವಹಿಸಿದರು.
ಈ ವೇಳೆ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ| ಡಿ.ಬಿ. ನಾಯಕ, ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷೆ ರಾಜೇಶ್ವರಿ
ಮೋರೆ, ಜಿಪಂ ಸದಸ್ಯ ಶೀತಲ ಚವ್ಹಾಣ, ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಹೆಬ್ಟಾಳೆ, ಸಹಾಯಕ ಆಯುಕ್ತ ರಜನಿಕಾಂತ ಚವ್ಹಾಣ, ಸಾಧನಾ ಐಎಎಸ್ ತರಬೇತಿ ಮುಖ್ಯಸ್ಥೆ ಡಾ| ಜ್ಯೋತಿ ರಾಠೊಡ್, ಹಣಮಂತರಾವ್ ಚವ್ಹಾಣ, ಪ್ರವೀಣ ನಾಯಕರ್, ಎಸ್.ಬಿ. ಬಿರಾದಾರ, ಉಮಾಕಾಂತ ಪಾಟೀಲ್, ವಿನೋದಕುಮಾರ ಮೂಲಗೆ ಇತರರಿದ್ದರು. ಜನಪದ ಬುಕಟ್ಟು ಕಲಾ ಪರಿಷತ್ ಸಂಯೋಜಕ ಡಾ| ರಾಜಕುಮಾರ ಹೆಬ್ಟಾಳೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು.