ಶಿರಸಿ : ಅರಣ್ಯ ಇಲಾಖೆಯ ಜಿಲ್ಲೆಯ ಕೆನರಾ ವೃತ್ತದ ಹಿರಿಯ ಅರಣ್ಯ ಸಂರಕ್ಷಣಾಧಿಕಾರಿ ಅವರೊಂದಿಗೆ ಜೂನ್ 30 ಗುರುವಾರ ಮುಂಜಾನೆ 10:30ಕ್ಕೆ ಅರಣ್ಯ ಅತಿಕ್ರಮಣ ಹೋರಾಟಗಾರ ವೇದಿಕೆಯ ಸದಸ್ಯರೊಂದಿಗೆ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಚರ್ಚಿಸುವ ಸಭೆ ನಿಗದಿಗೊಳಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವಿಂದ್ರ ನಾಯ್ಕ ತಿಳಿಸಿದ್ದಾರೆ.
ಇತ್ತೀಚಿಗೆ ನಿರಂತರ ಅರಣ್ಯ ಸಿಬ್ಬಂದಿಗಳಿಂದ ಅರಣ್ಯವಾಸಿಗಳ ಮೇಲೆ ಕಿರುಕುಳ, ದೌರ್ಜನ್ಯ, ಮಾನಸಿಕ ಹಿಂಸೆ ಮತ್ತು ಕಾನೂನಿಗೆ ವ್ಯತಿರಿಕ್ತವಾಗಿ ಅರಣ್ಯ ಇಲಾಖೆ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಭೆಯನ್ನು ಸಂಘಟಿಸಲಾಗಿದೆ. ಆಸಕ್ತ ಅರಣ್ಯವಾಸಿಗಳು ಆಗಮಿಸಲು ಪ್ರಕಟಣೆಯಲ್ಲಿ ಕೋರಿದ್ದಾರೆ.
ಇದನ್ನೂ ಓದಿ : ಮಡಿಕೇರಿ: ಕರಿಕೆ ಗ್ರಾಮದ ಕುಂಡತ್ತಿಕಾನದಲ್ಲಿ ಮನೆ ಮೇಲೆ ಉರುಳಿದ ಬಂಡೆ: ಗ್ರಾಮಸ್ಥರಲ್ಲಿ ಆತಂಕ