Advertisement

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಆರಂಭ

10:22 PM Mar 25, 2021 | Team Udayavani |

ಶಿಡ್ಲಘಟ್ಟ: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಗ್ರಾಮದಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದ್ದು ವಿಶ್ವವಿದ್ಯಾಲಯ ಸ್ಥಾಪನೆಗೆ ಮೀಸಲಾಗಿರುವ ಜಮೀನು ಹಸ್ತಾಂತರಿಸುವ ಪ್ರಕ್ರಿಯೆಗೆ ಶಿಡ್ಲಘಟ್ಟ ತಹಶೀಲ್ದಾರ್ ಬಿಎಸ್ ರಾಜೀವ್ ಅವರ ನೇತೃತ್ವದಲ್ಲಿ ಚಾಲನೆ ನೀಡಲಾಗಿದೆ.

Advertisement

ಜಿಲ್ಲಾಧಿಕಾರಿ ಆರ್ ಲತಾ, ಅಪರ ಜಿಲ್ಲಾಧಿಕಾರಿ ಹೆಚ್ ಅಮರೇಶ್ ಹಾಗೂ ಉಪವಿಭಾಗಾಧಿಕಾರಿ ರಘುನಂದನ್ ಅವರ ಸೂಚನೆ ಹಾಗೂ ನಿರ್ದೇಶನದಂತೆ ಶಿಡ್ಲಘಟ್ಟ ತಹಶೀಲ್ದಾರ್ ಬಿಎಸ್ ರಾಜೀವ್ ಅವರ ನೇತೃತ್ವದಲ್ಲಿ ಗ್ರಾಮಾಂತರ ಪೋಲೀಸ್ ಠಾಣೆಯ ಪಿಎಸ್‍ಐ ಲಿಯಾಖತ್ತುಲ್ಲಾ ಮತ್ತು ಸಿಬ್ಬಂದಿಯ ಸೂಕ್ತ ಪೋಲೀಸ್ ಬಂದೋಬಸ್ತ್ ನಡುವೆ ಶಿಡ್ಲಘಟ್ಟ ತಾಲೂಕಿನ ಸರ್ವೆ ನಂ.47 ರಲ್ಲಿ 110 ಎಕರೆ 25 ಗುಂಟೆ ಜಮೀನು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯಕ್ಕೆ ಹಸ್ತಾಂತರಿಸಲು ಚಾಲನೆ ನೀಡಿ ಈಗಾಗಲೇ ಟ್ರೆಂಚ್ ಮಾಡುವ ಕಾರ್ಯ ಪ್ರಾರಂಭವಾಗಿದೆ.

ಶಿಡ್ಲಘಟ್ಟ ತಾಲೂಕಿನ ಅಮರಾವತಿ ಬಳಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ಥಾಪಿಸಲು ಸರ್ಕಾರ ಹಸಿರು ನಿಶಾನೆ ತೋರಿಸಿದರು ಸಹ ಜಮೀನು ಸ್ವಾಧೀನ ಮಾಡಿಕೊಳ್ಳುವ ವಿಚಾರದಲ್ಲಿ ಸ್ಥಳೀಯ ರೈತರು ಪ್ರತಿರೋಧ ವ್ಯಕ್ತಪಡಿಸಿದರು ಇದರಿಂದ ವಿಶ್ವಾವಿದ್ಯಾಲಯ ಸ್ಥಾಪನೆ ಮಾಡುವ ಕಾರ್ಯ ವಿಳಂಭವಾಗಿತ್ತು ಕೋಲಾರ-ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಮೀಪದಲ್ಲಿರುವ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಬಳಿ ಬೆಂಗಳೂರು ವಿವಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕ ಕೇಂದ್ರ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್ ಹೇಳಿದರು ಮತ್ತೊಂದಡೆ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರು ಸಹ ಅಮರಾವತಿ ಬಳಿ ನೆನೆಗುದಿಗೆ ಬಿದ್ದಿದ್ದ ವಿಶ್ವವಿದ್ಯಾಲಯ ಸ್ಥಾಪಿಸಲು ಜಮೀನು ಹಸ್ತಾಂತರ ಮಾಡಲಾಗುವುದೆಂದು ಇತ್ತೀಚೆಗೆ ತಿಳಿಸಿದರು. ಉಪಮುಖ್ಯಮಂತ್ರಿ ಡಾ ಅಶ್ವಥನಾರಾಯಣರವರು ಶಿಡ್ಲಘಟ್ಟ ತಾಲೂಕಿನ ಅಮರಾವತಿ ಬಳಿ ನಾಲೇಡ್ಜ್ ಸೆಂಟರ್ ಮಾಡುವುದಾಗಿ ಘೋಷಣೆ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕಾಮಗಾರಿ ಆರಂಭಿಸುವ ವಿಚಾರದಲ್ಲಿ ಆಗುತ್ತಿರುವ ವಿಳಂಭದ ಕುರಿತು ಶಿಕ್ಷಣ ಪ್ರೇಮಿಗಳು ಅಸಮಾಧಾನ ವ್ಯಕ್ತಪಡಿಸಿದರು ಇದೀಗ ಶಿಡ್ಲಘಟ್ಟ ತಾಲೂಕು ಆಡಳಿತ ಎಚ್ಚೆತ್ತುಕೊಂಡಿದ್ದು ವಿಶ್ವವಿದ್ಯಾಲಯ ಸ್ಥಾಪಿಸುವ ನಿಟ್ಟಿನಲ್ಲಿ ಜಮೀನು ಸ್ವಾಧೀನ ಮಾಡಿಕೊಳ್ಳುವ ಕ್ರಮ ಕೈಗೊಂಡಿದ್ದಾರೆ  ಮುಂದಿನ 10 ದಿನಗಳ ಒಳಗೆ ವಿಶ್ವವಿದ್ಯಾಲಯಕ್ಕೆ ಮಂಜೂರಾಗಿರುವ ಜಮೀನು ಹಸ್ತಾಂತರಿಸಲು ಕಂದಾಯ ಇಲಾಖೆ ಅಧಿಕಾರಿಗಳು ದೃಢಸಂಕಲ್ಪ ಮಾಡಿದ್ದು ಭೂ ಸ್ವಾಧೀನ ಪ್ರಕ್ರಿಯೆ ಶರವೇಗದಲ್ಲಿ ನಡೆಯುತ್ತಿದೆ.

ಶಿಡ್ಲಘಟ್ಟ ತಹಶೀಲ್ದಾರ್ ಬಿ.ಎಸ್.ರಾಜೀವ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಚರಣೆಗೆ ಪೋಲಿಸ್ ಇಲಾಖೆಯ ಜೊತೆಗೆ ಬೆಂಗಳೂರು ವಿಶ್ವ ವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ದೇವರಾಜ್ ಸೂಲಿಬೆಲೆ, ಎಂವಿ ರಂಗಪ್ಪ ಸಾಥ್ ನೀಡಿದ್ದು ರೈತರು ಸಹ ಸಹಕಾರ ನೀಡುತ್ತಿದ್ದಾರೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೋಲಿಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ,ಅಪರ ಜಿಲ್ಲಾಧಿಕಾರಿ,ಉಪ ವಿಭಾಗಾಧಿಕಾರಿಗಳ ನಿರ್ದೇಶನ ಮತ್ತು ಸೂಚನೆಯಂತೆ ಶಿಡ್ಲಘಟ್ಟ ತಾಲೂಕಿನ ಅಮರಾವತಿ ಬಳಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ನಿರ್ಮಾಣಕ್ಕಾಗಿ ಮಂಜೂರಾಗಿರುವ ಜಮೀನು ಹಸ್ತಾಂತರಿಸಲು ಪ್ರಕ್ರಿಯೆ ಆರಂಭಿಸಿದ್ದೇವೆ ಸ್ಥಳೀಯ ರೈತರು ಸಹ ಸಹಕಾರ ನೀಡುತ್ತಿದ್ದಾರೆ 10 ದಿನದೊಳಗೆ ಜಮೀನು ಹಸ್ತಾಂತರಿಸುತ್ತೇವೆ.-ಬಿ.ಎಸ್.ರಾಜೀವ್ ತಹಶೀಲ್ದಾರ್ ಶಿಡ್ಲಘಟ್ಟ

Advertisement

Udayavani is now on Telegram. Click here to join our channel and stay updated with the latest news.

Next