Advertisement
ರೈತರ ನಂಬಿಗಸ್ತ ಮಳೆ ರೋಹಿಣಿ 25ರಿಂದ ಆರಂಭವಾಗುತ್ತಿದ್ದು, ಈ ರೋಹಿಣಿ ಮಳೆ ಕೈ ಹಿಡಿದರೆ ಬದುಕು ಬಂಗಾರವಾಗುತ್ತದೆ ಎಂಬುದು ಅನ್ನದಾತರ ಆಸೆ. ಈ ಬಾರಿ ಪೂರ್ವಭಾವಿಯಾಗಿ ಉತ್ತಮ ಮಳೆಯಾಗಿದ್ದು, ರೈತರು ಬಿತ್ತನೆಗೆ ಬೇಕಾದ ಕುಂಟೆ, ಪಲಗಾ, ಕೂರಿಗೆ, ನೊಗ, ಬುಕ್ಕಾ ಸಿದ್ಧತೆಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಡಿಗೇರ ಹಾಗೂ ಕಮ್ಮಾರರ ಬಳಿ ತಮ್ಮ ಪರಿಕರಗಳ ದುರಸ್ತಿ ಮಾಡಿಸಿಕೊಂಡು ಬಿತ್ತನೆಗೆ ಸಿದ್ಧವಾಗಿದ್ದಾರೆ.
Related Articles
Advertisement
ಸಲಕರಣೆ ಬಾಡಿಗೆ: ಭೂಮಿ ಉಳುಮೆಗೆ ಟ್ರ್ಯಾಕ್ಟರ್ ಹಾಗೂ ಎತ್ತುಗಳಿಗೆ ಭಾರಿ ಬೇಡಿಕೆ ಬಂದಿದೆ. ಟ್ರ್ಯಾಕ್ಟರ್ ಉಳುಮೆ ಮಾಡಲು ಎಕರೆಗೆ 2100ರೂ. ಹಾಗೂ ಎತ್ತುಗಳ ಉಳುಮೆಗೆ ಒಂದು ಎಕರೆ 1600 ರೂ.ಗಳಷ್ಟು ಬೇಡಿಕೆ ಇದೆ. ಒಂದು ಎಕರೆ ನೆಲ ರೆಡಿ ಮಾಡಲು ಸುಮಾರು 7000ರಿಂದ 8000 ರೂ. ವರೆಗೆ ಬಾಡಿಗೆ ಆಗುತ್ತದೆ.
ರೈತರು ಸದ್ಯ ರೋಹಿಣಿ ಮಳೆಯ ನಿರೀಕ್ಷೆಯಲ್ಲಿದ್ದಾರೆ. ಮಳೆ ಸಮೃದ್ಧಿಯಾಗಿ ಬಂದರೆ ರೈತನ ಬದುಕು ಬಂಗಾರವಾಗುವುದರಲ್ಲಿ ಎರಡು ಮಾತಿಲ್ಲ. ಈ ಸಂದರ್ಭದಲ್ಲಿ ಯಾವುದೇ ಬಿತ್ತನೆ ಮಾಡಿದರೂ ಬರುವ ರೋಗಗಳು ಕಡಿಮೆ. ಬೆಳೆಯೂ ಸಮೃದ್ಧಿಯಾಗಿ ಬರುತ್ತದೆ. –ಸದಾಶಿವ ಬಂಗಿ, ಸಾವಯವ ಕೃಷಿಕರು, ಜಗದಾಳ
-ಕಿರಣ ಆಳಗಿ