Advertisement

ಭೂ ಪರಿವರ್ತನೆ ಮಸೂದೆ ಅಂಗೀಕಾರ

09:05 PM Dec 22, 2022 | Team Udayavani |

ಬೆಳಗಾವಿ: ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ  ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ “ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022’ಕ್ಕೆ ವಿಧಾನಸಭೆಯಲ್ಲಿ  ಗುರುವಾರ ಅಂಗೀಕಾರ ನೀಡಲಾಯಿತು.

Advertisement

ಕಂದಾಯ ಸಚಿವ ಆರ್‌.ಆಶೋಕ್‌ ಮಾತನಾಡಿ, ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ  ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.

ಆರ್‌ಟಿಸಿ, 11-ಇ ಸ್ಕೆಚ್‌ ಮತ್ತು ಮ್ಯುಟೇಷನ್‌ ಈ ಮೂರು ದಾಖಲೆಗಳೊಂದಿಗೆ ಸ್ವಯಂ ಘೋಷಣೆ ಪತ್ರ (ಅಫಿದವಿತ್‌) ಸಲ್ಲಿಸಿದರೆ 7 ದಿನಗಳೊಳಗೆ ಭೂಪರಿವರ್ತನೆ ಕೋರಿಕೆ ಅರ್ಜಿಯನ್ನು ವಿಲೇವಾರಿ ಮಾಡಬೇಕು. ವಾರದೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಅನುಮೋದನೆ ನೀಡದಿದ್ದರೆ, ಸ್ವಯಂ ಭೂಪರಿವರ್ತನೆಯಾಗಿದೆ ಎಂದು ಪರಿಗಣಿಸಲಾಗುವುದು ಎಂದರು.

ಗ್ರಾಮೀಣ ಭಾಗದಲ್ಲಿ 30 ದಿನ:

ಭೂಪರಿವರ್ತನೆಗೆ ಯೋಜನಾ ಪ್ರದೇಶಗಳ ವ್ಯಾಪ್ತಿಯಲ್ಲಿ 7 ದಿನಗಳ ಕಾಲಾವಕಾಶ ಹಾಗೂ ಗ್ರಾಮೀಣ ಭಾಗದಲ್ಲಿ 30 ದಿನಗಳ ಕಾಲಾವಕಾಶ ನಿಗದಿ ಮಾಡಲಾಗಿದೆ. ಮಸೂದೆಯನ್ನು ಪಕ್ಷಭೇದವಿಲ್ಲದೆ ಸದಸ್ಯರು ಸ್ವಾಗತಿಸಿದರು. ಜತೆಗೆ ಕೆಲವು ಸಲಹೆಗಳನ್ನೂ ನೀಡಿದರು. ಕಾಯಿದೆಗೆ ನಿಯಮಾವಳಿಗಳ ರಚನೆ ಸಂದರ್ಭದಲ್ಲಿ ಈ ಸಲಹೆಗಳನ್ನು ಪರಿಗಣಿಸುವುದಾಗಿ ಸಚಿವರು ಭರವಸೆ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next