Advertisement

ಭೂ ವ್ಯಾಜ್ಯ ಗಲಾಟೆ: ಗಾಳಿಯಲ್ಲಿ ಗುಂಡು ಹಾರಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ

03:30 PM Oct 09, 2022 | Team Udayavani |

ಚಿಕ್ಕಮಗಳೂರು: ಭೂ ವ್ಯಾಜ್ಯಕ್ಕೆ ಸಂಬಂಧ ಪಟ್ಟಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದು, ರೈತ ಸಂಘದ ಜಿಲ್ಲಾಧ್ಯಕ್ಷ ದುಗ್ಗಪ್ಪಗೌಡ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

Advertisement

ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದೆ.  ಮಂಚೇಗೌಡ – ದುಗ್ಗಪ್ಪಗೌಡ ಎಂಬುವವರ ನಡುವೆ ಜಮೀನು ವಿವಾದವಿತ್ತು.  ವ್ಯಾಜ್ಯದ ಜಾಗದಲ್ಲಿ ದುಗ್ಗಪ್ಪ ಗೌಡರು ಮನೆ ನಿರ್ಮಾಣ ಮಾಡಿದ್ದಾರೆಂದು ಆರೋಪಿಸಲಾಗಿತ್ತು.

ಈ ಭೂ ವಿವಾದದ ಪಂಚಾಯ್ತಿಗೆಂದು ತೆರಳಿದ್ದವರ ಮೇಲೆ ದುಗ್ಗಪ್ಪ ಗೌಡ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ವ್ಯಕ್ತಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳುವನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ಪೊಲೀಸರು ದುಗ್ಗಪ್ಪ ಗೌಡನನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next