Advertisement

ವಿಧಾನಸಭೆಯಲ್ಲಿ ಭೂ ಕಬಳಿಕೆ ನಿಷೇಧ ವಿಧೇಯಕ ಮಂಡನೆ

01:12 PM Sep 14, 2022 | Team Udayavani |

ಬೆಂಗಳೂರು:  ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಹೊಂದಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರಕಾರ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.

Advertisement

ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜಿ.ಸಿ.ಮಾಧುಸ್ವಾಮಿ ಈ ವಿಧೇಯಕವನ್ನು ಮಂಡಿಸಿದ್ದು, ಸದನ ಚರ್ಚೆಗೆ ಅಂಗೀಕರಿಸಿದೆ.

ಇದನ್ನೂ ಓದಿ: ಜೆಡಿಎಸ್‌ಗೆ ಮೋದಿ ,ಅಮಿತ್ ಶಾ ವಿಚಾರ ಬಂದಾಗ ಮಾತ್ರ ಹಿಂದಿ ವಿರೋಧ ನೆನೆಪಾಗುತ್ತದೆ: ಸಿಟಿ ರವಿ

ಭೂ ಕಬಳಿಕರ ಕಾಯಿದೆ – 2011 ರ ಹಾಗೂ 22ರ ಅಧಿಸೂಚನೆಗೆ ತಿದ್ದುಪಡಿ ತರಲಾಗಿದ್ದು, ನಗರ ಪಾಲಿಕೆ ಪರಿಮಿತಿ ಒಳಗಿನ ಸರ್ಕಾರ, ವಕ್ಫ್ ಅಥವಾ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳು , ಸ್ಥಳೀಯ ಪ್ರಾಧಿಕಾರಗಳು, ಸರ್ಕಾರದ ಒಡೆತನದ , ನಿಯಂತ್ರಣ, ವ್ಯವಸ್ಥಾಪನೆಗೆ ಒಳಪಟ್ಟ ಭೂಮಿಯ ವಿವಾದಗಳು ತಕ್ಷಣದಿಂದ ಕೊನೆಗೊಳಿಸುವುದಕ್ಕಾಗಿ ಈ ವಿಧೇಯಕ ಜಾರಿಗೆ ತರಲಾಗುತ್ತಿದೆ. ಆದರೆ ಬಿಬಿಎಂಪಿ ಹಾಗೂ ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಸ್ವತ್ತುಗಳನ್ನು ಈ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಚಾಮರಾಜಪೇಟೆ ಈದ್ಗಾ ಭೂ ವಿವಾದ ಹಿನ್ನೆಲೆಯಲ್ಲಿ ಸರಕಾರ ಈ ಕಾಯಿದೆ ಜಾರಿಗೆ ತರಲು ಮುಂದಾಗಿದೆ ಎಂಬ ಚರ್ಚೆ ಈಗ ಪ್ರಾರಂಭವಾಗಿದೆ.

Advertisement

ಈ ವಿಧೇಯಕದ ಪರ್ಯಾಲೋಚನೆ ಮುಂದಿನ ವಾರ ಉಭಯ ಸದನಗಳಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಡೆ ಕುತೂಹಲ ಮೂಡಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next